ಕುಮಟಾ : ಬಡವರು, ರೈತರು, ಮೀನುಗಾರು ಸಮೃದ್ದಿ ಜೀವನ ನಡೆಸಬೇಕಾದರೆ ದೇಶದಲ್ಲಿ ಕಾಂಗ್ರೆಸ್ ಸರಕಾರ ಅಧಿಕರ ಸ್ವೀಕರಿಸಬೇಕು. ಜಿಲ್ಲೆಯ ಅರಣ್ಯ ಅತಿಕ್ರಮಣ ಸಮಸ್ಯೆ ಬಗೆಹರಿಸುವುದು ನಮ್ಮ ಗ್ಯಾರಂಟಿಯಲ್ಲೊAದಾಗಿದೆ ಎಂದು ಕೆನರಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಲೋಕಸಭೆ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹೇಳಿದರು.
ಅವರು ಕುಮಟಾ ತಾಲೂಕಿನ ನಾಡವರ ಸಭಾ ಭವನ ತೋರ್ಕೆಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಲೋಕಸಭಾ ಚುನಾವಣೆಯ ಪೂರ್ವ ತಯಾರಿ ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳು ವೈದ್ಯ,ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಾಯಿ ಗಾಂವ್ಕರ್, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ, ಕುಮಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭುವನ ಭಾಗವತ್, ಕೆಪಿಸಿಸಿ ಕಾರ್ಯದರ್ಶಿ ನಿವೇದಿತ್ ಆಳ್ವಾ ಹಾಗೂ ಕಾಂಗ್ರೆಸ್ ಮುಖಂಡರಾದ ಮಂಜುನಾಥ್ ನಾಯ್ಕ,ಆರ್ ಎಚ್ ನಾಯ್ಕ,ಬಾಸ್ಕರ್ ಪಟಗಾರ ಹೊನ್ನಪ್ಪ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.
More Stories
ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶೇ. 94.23
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಜೆಡಿಎಸ್ ತೊರೆದು ‘ಕೈ’ ಹಿಡಿದ ಶಾಬಂದ್ರಿ