May 5, 2024

Bhavana Tv

Its Your Channel

ಮುರ್ಡೇಶ್ವರದಲ್ಲಿ ಶಿವರಾತ್ರಿ ಪ್ರಯುಕ್ತ ದೇವರ ದರ್ಶನ ಪಡೆದ ಸಾವಿರಾರು ಭಕ್ತರು

ಭಟ್ಕಳ ತಾಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಮುರ್ಡೇಶ್ವರಕ್ಕೆ ಶಿವರಾತ್ರಿ ಪ್ರಯುಕ್ತ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆಯುವುದರೊಂದಿಗೆ ರುದ್ರಾಭಿಷೇಕ, ಜಲಾಭಿಷೇಕ ಸೇರಿದಂತೆ ವಿವಿಧ ಸೇವಾ ಕಾರ್ಯಗಳನ್ನು ಕೈಗೊಂಡರು.

ಈ ವರ್ಷ ಭಕ್ತರ ಸಂಖ್ಯೆ ಹೆಚ್ಚುವ ಸಂಭವವಿರುವ ಕಾರಣ ದೇವಸ್ಥಾನದ ವತಿಯಿಂದ ಬೆಳಗಿನ ಜಾವ 4.30ಕ್ಕೆ ದೇವಸ್ಥಾನದ ಬಾಗಿಲನ್ನು ತೆರೆದು ಭಕ್ತರಿಗೆ ಅನುಕೂಲ ಮಾಡಿಕೊಡಲಾಗಿತ್ತು. ದೇವಸ್ಥಾನದ ಬಾಗಿಲು ತೆರೆಯುವದರಲ್ಲಿಯೇ ಜನತೆ ಸರದಿಯ ಸಾಲಿನಲ್ಲಿ ನಿಂತು ದರ್ಶನಕ್ಕೆ ಕಾಯುತ್ತಿದ್ದರೆ ದೇವರ ಬಾಗಿಲು ತೆರೆಯುತ್ತಿದ್ದಂತೆಯೇ ಭಕ್ತರ ಸಂಖ್ಯೆ ಹೆಚ್ಚುತ್ತಾ ಹೋಗಿದ್ದು ಸುಮಾರು ಎರಡು ಕಿ.ಮಿ. ತನಕವೂ ಸರತಿಯ ಸಾಲು ಮುಂದುವರಿದೇ ಇತ್ತು. ದೇವಸ್ಥಾನದಲ್ಲಿ ಭಕ್ತರಿಗೆ ಬೆಳಿಗ್ಗೆನ ಉಪಹಾರದ ವ್ಯವಸ್ಥೆಯನ್ನು ಮಾಡಿದ್ದು ಸಾವಿರಾರು ಜನರು ಉಪಹಾರ ಸ್ವೀಕರಿಸಿದರು.
ಮುರ್ಡೇಶ್ವರದ ಸಾವಿರಾರು ಭಕ್ತರು ಸರದಿಯ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದಿದ್ದು ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಊರಿನ ಭಕ್ತರ ಸಂಖ್ಯೆಯೂ ಅಧಿಕ ಸಂಖ್ಯೆಯಲ್ಲಿತ್ತು. ಸಾವಿರಾರು ಜನರು ಸೇರಿದ್ದರು ಕೂಡಾ ಯಾವುದೇ ತೊಂದರೆಯಾಗದAತೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು ಪ್ರತಿಯೊಂದು ಹಂತದಲ್ಲಿಯೂ ಕೂಡಾ ಪೊಲೀಸರು ಸಹಕರಿದರು. ಶಿವರಾತ್ರಿಯ ಅಂಗವಾಗಿ ಶ್ರೀ ಮುರುಡೇಶ್ವರ ದೇವರಿಗೆ ರುದ್ರಾಭಿಷೇಕ, ಜಲಾಭೀಷೇಕ, ಬಿಲ್ವಾಅರ್ಚನೆ, ಮಹಾಪೂಜೆ ಇದ್ಯಾದಿಗಳು ನಡೆದು ರಾತ್ರಿ ಸ್ವರ್ಣ ರಥೋತ್ಸವವು ನೂರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು.
ತಾಲೂಕಿನ ಇತರ ಶಿವ ಕ್ಷೇತ್ರಗಳು ಹಾಗೂ ಪುರಾಣ ಪ್ರಸಿದ್ಧ ದೇವಾಲಯಗಳಲ್ಲಿಯೂ ಕೂಡಾ ಶಿವರಾತ್ರಿ ಆಚರಣೆಯನ್ನು ಮಾಡಲಾಗಿದ್ದು ಮುಖ್ಯವಾಗಿ ಬಂದರದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಕುಟುಮೇಶ್ವರ ದೇವಸ್ಥಾನ, ನಗರದ ಪುರಾತನ ಚೋಳೇಶ್ವರ ದೇವಸ್ಥಾನ, ಶ್ರೀ ಲಕ್ಷಿö್ಮÃನಾರಾಯಣ ರಾಮನಾಥ ಶಾಂತೇರಿ ಕಾಮಾಕ್ಷಿ ಬೇತಾಳ ದೇವಸ್ಥಾನ, ಆಸರಕೇರಿಯ ವಿರೂಪಾಕ್ಷ ದೇವಸ್ಥಾನ, ಪಶುಪತಿ ದೇವಸ್ಥಾನ, ಮೂಡಭಟ್ಕಳದ ಈಶ್ವರ ದೇವಸ್ಥಾನ, ಬೈಲೂರಿನ ಮಾರ್ಕಾಂಡೇಶ್ವರ, ಮಾರೂಕೇರಿಯ ಕೊಡಕಿಯ ಶಂಭುಲಿAಗೇಶ್ವರ ದೇವಸ್ಥಾನ ಸೇರಿದಂತೆ ತಾಲ್ಲೂಕಿನ ಎಲ್ಲಾ ಶಿವಾಲಯಕ್ಕೂ ಕೂಡಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರಿಗೆ ಶಿವರಾತ್ರಿ ಪ್ರಯುಕ್ತ ಅಭಿಷೇಕ, ಅರ್ಚನೆಗಳನ್ನು ಮಾಡಿಸಿದರು.
ಶಿವರಾತ್ರಿಯ ಪ್ರಯುಕ್ತ ತಾಲೂಕಿನ ಶಿವತಾಣವಷ್ಟೇ ಅಲ್ಲದೇ ಬೇರೆ ಬೇರೆ ದೇವಸ್ಥಾನಗಳಿಗೂ ಕೂಡಾ ಭಕ್ತರು ಆಗಮಿಸಿ ಭಕ್ತಿ ಭಾವದಿಂದ ಪೂಜಿಸಿದರು. ವರ್ಷಂಪ್ರತಿಯAತೆ ಭಟ್ಕಳದ ನೂರಾರು ಜನರು ಸಾಗರ ತಾಲೂಕಿನ ಕಾಡಿನಲ್ಲಿ ಎತ್ತರದಲ್ಲಿ ಬೃಹತ್ ಕಲ್ಲು ಬಂಡೆ ಮಧ್ಯದಲ್ಲಿರುವ ಅತಿ ಪುರಾತನ ದೇವಾಲಯವಾದ ಭೀಮೇಶ್ವರಕ್ಕೆ ತೆರಳಿ ತೀರ್ಥ ಸ್ನಾನ, ಪೂಜೆ ಸಲ್ಲಿಸಿದರು. ತಾಲೂಕಿನಲ್ಲಿ ಶಿವರಾತ್ರಿಯ ಉತ್ಸವಗಳು ಶಾಂತಿಯುತವಾಗಿ ನಡೆದಿದ್ದು ಹಲವೆಡೆ ರಾತ್ರಿ ಅಖಂಡ ಭಜನೆ, ಧಾರ್ಮಿಕ ಕಾರ್ಯಕ್ರಮಗಳು, ಜಾಗರಣೆಗಳನ್ನು ಹಮ್ಮಿಕೊಳ್ಳಲಾಗಿದೆ.

error: