May 18, 2024

Bhavana Tv

Its Your Channel

ಬೀನಾ ವೈದ್ಯ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಒಲಿಂಪಿಯಾಡ ಪದಕ ವಿತರಣ ಸಮಾರಂಭ:

ಮುರ್ಡೇಶ್ವರ ; ಒಲಿಂಪಿಯಾಡ ಪರೀಕ್ಷೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪದಕ ವಿತರಣಾ ಕಾರ್ಯಕ್ರಮವು ಅದ್ದೂರಿಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಭಟ್ಕಳದ ಪ್ರಸಿದ್ಧ ಪತ್ರಕರ್ತರಾದ ಶ್ರೀ ರಾಧಾಕೃಷ್ಣ ಭಟ್ ರವರು ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆ ಗೈಯಬೇಕು. ಬೀನಾ ವ್ಯದ್ಯ ಸಂಸ್ಥೆಯಲ್ಲಿ ಪಾಠದ ಜೊತೆಗೆ ನೈತಿಕ ಶಿಕ್ಷಣ ನೀಡುವುದು ಸಂತೋಷದ ವಿಷಯ. ಸಾಧನೆ ಗೈಯುವಲ್ಲಿ ವಿದ್ಯಾರ್ಥಿಗಳಗೆ ಪಾಲಕರು ಆಧಾರ ಸ್ಥಂಭವಾಗಿ ನಿಲ್ಲಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬೀನಾ ವ್ಯದ್ಯ ಶಿಕ್ಷಣ ಸಂಸ್ಥೆಯ ಟ್ರಸ್ಟೀ ಹಾಗೂ ವ್ಯವಸ್ಥಾಪಕ ನಿರ್ದೇಶಕಿಯವರಾದ ಡಾ.ಪುಷ್ಪಲತಾ ಎಂ ವೈದ್ಯರವರು ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಂಬAಧಿಸಿದ ಎಲ್ಲಾ ಸೌಲಭ್ಯಗಳನ್ನು ಬೀನಾ ವೈದ್ಯ ಶಿಕ್ಷಣ ಸಂಸ್ಥೆ ನೀಡುತ್ತಿದೆ. ಈಗಿನ ಕಾಲದಲ್ಲಿ ಶಿಕ್ಷಣದ ಜೊತೆಗೆ ನ್ಯತಿಕ ಶಿಕ್ಷಣದ ಅಗತ್ಯತೆಯ ಬಗ್ಗೆ ತಿಳಿಸಿದರು ಎಲ್ಲಾ ಪಾಲಕರೂ ನಮ್ಮೊಂದಿಗೆ ಕೈಜೋಡಿಸಿ ಈ ಸಂಸ್ಥೆಯನ್ನು ಒಂದು ಮಾದರಿ ಶಿಕ್ಷಣ ಸಂಸ್ಥೆಯನ್ನಾಗಿ ಮಾಡೋಣ ಎಂದು ತಿಳಿಸಿದರು.

ಪದವಿ ಕಾಲೇಜಿನ ಪ್ರಾಚಾರ್ಯರಾದ ಮಾಧವ ಪೂಜಾರಿಯವರು ಮಾತನಾಡಿ ಈ ಶೈಕ್ಷಣಿಕ ವರ್ಷದಿಂದ ಪದವಿ ಕಾಲೇಜಿನಲ್ಲಿ ಪ್ರಾರಂಭವಾಗುವ ಹೊಸ ಕೋಸುಗಳಾದ ಬಿ.ಬಿ.ಎ ಹಾಗೂ ಬಿ.ಸಿ.ಎ ಗಳ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಕಿ ರಂಜಿತಾ ಅವರು ಪ್ರಾರ್ಥಿಸಿದರು, ಬೀನಾ ವೈದ್ಯ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲರಾದ ಡಾ. ಜಗನ್ನಾಥ ಅವರು ಸ್ವಾಗತಿಸಿ, ಶಿಕ್ಷಕಿ ಸಂಗೀತ ವಂಧಿಸಿದರು. ಶಿಕ್ಷಕಿ ಊಮೈಮಾ ಕಾರ್ಯಕ್ರಮ ನಿರೂಪಿಸಿದರು.

error: