April 16, 2024

Bhavana Tv

Its Your Channel

ರಾಷ್ಟ್ರ ಧ್ವಜಕ್ಕೆ ಅಗೌರವ ಆಗದಂತೆ ಎಚ್ಚರಿಕೆ ವಹಿಸುವುದು ಮುಖ್ಯ-ನಾಗರಾಜ ನಾಯ್ಕ ಮಾಳ್ಕೋಡ

ಸಿದ್ದಾಪುರ; ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಅ.13 ರಿಂದ 15 ರವರೆಗೆ ಪ್ರತಿ ಮನೆ ಮತ್ತು ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸುವುದಕ್ಕೆ ಸೂಚಿಸಲಾಗಿದೆ. ಆ ಮೂಲಕ ರಾಷ್ಟ್ರಗೌರವವನ್ನು ತೋರಲು ‘ಹರ್ ಘರ್ ತಿರಂಗಾ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಸಮಯದಲ್ಲಿ ಅತ್ಯಂತ ಜಾಗರೂಕತೆಯಿಂದ ಮತ್ತು ಎಚ್ಚರಿಕೆಯಿಂದ ರಾಷ್ಟ್ರಧ್ವಜಕ್ಕೆ ಅಗೌರವ ಆಗದಂತೆ ಎಚ್ಚರಿಕೆ ವಹಿಸುವುದು ತೀರಾ ಮುಖ್ಯ ಎಂದು ಫೇವಾರ್ಡ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಮಾಳ್ಕೋಡ ಹೇಳಿದರು.
ಅವರು ಸ್ಥಳೀಯ ಧನ್ವಂತರಿ ಆಯುರ್ವೇದ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ ವತಿಯಿಂದ ಭಾರತೀಯ ವೈದ್ಯ ಪದ್ಧತಿಯ ರಾಷ್ಟಿçÃಯ ಆರೋಗ್ಯ ನವದೆಹಲಿ, ರಾಜೀವ ಗಾಂಧಿ ಆರೋಗ್ಯ ವಿಜ್ಞಾನಿಗಳ ವಿಶವ್ವಿದ್ಯಾಲಯದ ನಿರ್ದೇಶನದಂತೆ ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಧ್ವಜ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಇಂದು ಎಲ್ಲಡೆ ಧ್ವಜ ಹಾರಿಸುತ್ತಿರುವುದರಿಂದ ಅದರ ಗೌರವವನ್ನು ಕಾಪಾಡಿಕೊಳ್ಳುವುದು ಅಗತ್ಯ. ವಿದ್ಯಾರ್ಥಿ ಯುವಜನರು ರಾಷ್ಟçಭಕ್ತಿ, ದೇಶಪ್ರೇಮವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.
ಸ್ಥಳೀಯ ಪಿಎಸೈ ಎಂ.ಜಿ.ಕುAಬಾರ ಮಾತನಾಡಿ ದೇಶದ 75 ಸ್ವಾತಂತ್ರೊö್ಯÃತ್ಸವನ್ನು ಅಮೃತ ಮಹೋತ್ಸವವಾಗಿ ಆಚರಿಸಲಾಗುತ್ತಿದೆ.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯಾವುದೆ ವ್ಯಸನಗಳಿಗೆ ಒಳಗಾಗುವುದಿಲ್ಲ ಎನ್ನುವ ಸಂಕಲ್ಪವನ್ನು ಮಾಡಬೇಕು. ಸ್ವಾತಂತ್ರö್ಯ ಮಹೋತ್ಸವದಲ್ಲಿ ಸಂಭ್ರಮದಲ್ಲಿ ಭಾಗಿಗಳಾಗಬೇಕು ಎಂದರು.
ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ರೂಪಾ ಭಟ್ಟ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ‘ಹರ್ ಘರ್ ತಿರಂಗಾ’ ಕಾರ್ಯಕ್ರಮದ ಕುರಿತಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಪ್ರತಿ ಮನೆಯಲ್ಲಿ ಧ್ವಜವನ್ನು ಹಾರಿಸುವಂತೆ ಪ್ರೇರೇಪಿಸಬೇಕು.ಆ ಮೂಲಕ ಕಾರ್ಯಕ್ರಮವನ್ನು ಯಶಸ್ವಗೊಳಿಸಬೇಕು ಎಂದರು.ಮಹಾವಿದ್ಯಾಲಯದ ಉಪನ್ಯಾಸಕರು ಉಪಸ್ಥಿತರಿದ್ದರು.
ಮಹಾವಿದ್ಯಾಲಯದ ಎನ್.ಎಸ್.ಎಸ್ ಅಧಿಕಾರಿ ಪ್ರೋ ರಾಘವೇಂದ್ರ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಆಯುರ್ವೇದ ವಿದ್ಯಾರ್ಥಿ ನಿಕಾರಿ ಕಾರ್ಯಕ್ರಮ ನಿರ್ವಹಿಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟçಧ್ವಜವನ್ನು ವಿತರಿಸಲಾಯಿತು.

error: