May 16, 2024

Bhavana Tv

Its Your Channel

ವಿ.ಆರ್.ಡಿ ಟ್ರಸ್ಟ್ ನ ಮೂಲಕ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಬಿಸ್ಕೆಟ್ ನೀಡಿ ಶುಭ ಹಾರೈಕೆ

ಶಿರಸಿ:- ಉತ್ತರ ಕನ್ನಡ ಜಿಲ್ಲೆಯ ಸಿರಸಿ ತಾಲೂಕಿನ ಬೀಳೂರಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ಮಾಜಿ ಸಚಿವರು,ಹಾಲಿ ಹಳಿಯಾಳದ ಶಾಸಕರಾದ ಆರ್.ವಿ. ದೇಶಪಾಂಡೆ ಹಾಗೂ ಪ್ರಶಾಂತ ದೇಶಪಾಂಡೆಯವರು ವಿ.ಆರ್. ಡಿ ಟ್ರಸ್ಟ್ ನ ಮೂಲಕ ಎಸ್.ಎಸ್.ಎಲ್.ಸಿ ಪರಿಕ್ಷೆಗೆ ಕುಳಿತ ವಿದ್ಯಾರ್ಥಿಗಳಿಗೆ ಬಿಸ್ಕಿಟನ್ನು ನೀಡಿ ಶುಭ ಹಾರೈಸಲಾಯಿತು.ಈ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ ಅಧ್ಯಕ್ಷರಾದ ಸಿ.ಎಫ್. ನಾಯ್ಕ ಕಾಂಗ್ರೆಸ್ ಪರಿಶಿಷ್ಟ ಜಾತಿ ಜಿಲ್ಲಾ ಅಧ್ಯಕ್ಷರಾದ ಬಸವರಾಜ ದೊಡ್ಮಿನಿ,ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ದೀಪಕ್ ದೊಡ್ಡುರ, ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾದ ನಾಗರಾಜ ನಾರ್ವೆಕರ, ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರುಗಳು ಹಾಗೂ ಅನೇಕ ಕಾರ್ಯಕರ್ತರು ಹಾಜರಿದ್ದರು .

ವೇಣುಗೋಪಾಲ ಮದ್ಗುಣಿ.

error: