May 17, 2024

Bhavana Tv

Its Your Channel

ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಸಚಿವ ಶಿವರಾಮ ಹೆಬ್ಬಾರ

ವರದಿ: ವೇಣುಗೋಪಾಲ ಮದ್ಗುಣಿ

ಶಿರಸಿ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ತಾಲೂಕಿನ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ” ಜಲ ಜೀವನ ಮಿಷನ್ ” ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿದರು.ನಂತರ ಬಸವೇಶ್ವರ ನಗರದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಅಂಗನವಾಡಿ ಕೇಂದ್ರವನ್ನು ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರ ಅವರು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು , ಸದಸ್ಯರು ಹಾಗೂ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರದ ವಿವಿಧಸ್ತರದ ಪದಾಧಿಕಾರಿಗಳು, ಬನವಾಸಿ ಭಾಗದ ಪ್ರಮುಖರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.


error: