April 29, 2024

Bhavana Tv

Its Your Channel

ಜಿಲ್ಲೆಯ ಅರಣ್ಯವಾಸಿಗಳ ಸಮಸ್ಯೆಗೆ ತುರ್ತು ಉನ್ನತ ಮಟ್ಟದ ಸಭೆ- ಸಚಿವ ಕೋಟ ಶ್ರೀನಿವಾಸ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯವಾಸಿಗಳ ಸಮಸ್ಯೆಗಳಿಗೆ ಸ್ಫಂದಿಸಿ ಶೀಘ್ರದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ, ಸಚಿವರ, ಜನಪ್ರತಿನಿಧಿಗಳ ತುರ್ತು ಸಭೆ ಕರೆಯಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು.

ಅವರು ಇಂದು ಸರಕಾರಿ ಮತ್ತು ಖಾಸಗಿ ಕಾರ್ಯಕ್ರದ ನಿಮಿತ್ತ ಆಗಮಿಸಿದ ಸಂದರ್ಭದಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಅವರ ಉಪಸ್ಥಿತಿಯಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಜಿಲ್ಲೆಯ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು, ಅಧಿಕಾರಿಗಳ ಕಾನೂನು ಬಾಹಿರ ಕೃತ್ಯದ ಕುರಿತು ಗಮನ ಸೆಳೆದ ಸಂದರ್ಭದಲ್ಲಿ ಹೇಳಿದರು. ಚರ್ಚೆಯ ಸಂದರ್ಭದಲ್ಲಿ ಜಿಲ್ಲಾದ್ಯಂತ ಕಾನೂನು ಬಾಹಿರವಾಗಿ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸುವ ಪ್ರಕ್ರೀಯೆ, ನಾಮನಿರ್ಧೇಶನ ಸದಸ್ಯರಿಲ್ಲದೇ ಅರಣ್ಯ ಹಕ್ಕು ಕಾಯಿದೆಯಲ್ಲಿ ಮಂಜೂರಿ ಪ್ರಕ್ರೀಯೆ ಜರುಗುತ್ತಿರುವುದು, ಅರಣ್ಯವಾಸಿಗಳ ಮೇಲೆ ದಾಖಲಿಸುತ್ತಿರುವ ಕ್ರೀಮಿನಲ್ ಪ್ರಕರಣ ಹಿಂತೆಗೆದುಕೊಳ್ಳುವ ಬಗ್ಗೆ ಚರ್ಚಿಸಲಾಯಿತು ಎಂದು ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದರು.
ಇತ್ತೀಚಿಗೆ ಜಿಲ್ಲೆಯಲ್ಲಿ ಅರಣ್ಯವಾಸಿಗಳ ವ್ಯತಿರಿಕ್ತವಾದ ಚಟುವಟಿಕೆಯ ಬಗ್ಗೆ ಇಗಾಗಲೇ ಸಭಾಧ್ಯಕ್ಷರು ಹಾಗೂ ಸಚಿವರು ಅರೇಬೈಲ್ ಶಿವರಾಮ ಹೇಬ್ಬಾರ್ ಗಮನ ಸೆಳೆದಿದ್ದಾರೆ ಎಂಬ ವಿಷಯವನ್ನ ಚರ್ಚೆ ಸಂದರ್ಭದಲ್ಲಿ ಪ್ರಸ್ತಾಪಿಸಿದರು.

error: