May 3, 2024

Bhavana Tv

Its Your Channel

ಸುಫ್ರೀಂ ಕೋರ್ಟನಲ್ಲಿ ಅರಣ್ಯ ಹಕ್ಕು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಅಂತಿಮ ವಿಚಾರಣೆ ಸಪ್ಟೆಂಬರ್ 5.

ಶಿರಸಿ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬAಧಿಸಿ ಸುಫ್ರೀಂ ಕೋರ್ಟ ನ್ಯೂಡೆಲ್ಲಿಯಲ್ಲಿ ಅಂತಿಮ ವಿಚಾರಣೆ ದಿ.ಸಪ್ಟೆಂಬರ್ 5 ರಿಂದ ಪ್ರಾರಂಭವಾಗಲಿದೆ ಎಂದು ಭೂಮಿ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ ತಿಳಿಸಿದ್ದಾರೆ.

ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತೀರಸ್ಕಾರವಾಗಿರುವ ಅರ್ಜಿದಾರರನ್ನು ಅರಣ್ಯ ಪ್ರದೇಶದಿಂದ ಒಕ್ಕಲೆಬ್ಬಿಸಿ, ಅತಿಕ್ರಮಣ ಪ್ರದೇಶವನ್ನು ಅರಣ್ಯೀಕರಣ ಮಾಡಬೇಕೆಂದು ಏಂಟು ಪರಿಸರವಾದಿ ಸಂಘಟನೆಗಳು ಸುಫ್ರೀಂ ಕೋರ್ಟನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬAಧಿಸಿ ಮಹತ್ವದ ವಿಚಾರಣೆ ಇದಾಗಿದೆ ಎಂದು ಅವರು ತಿಳಿಸಿದರು. ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಈ ಪ್ರಕರಣದಲ್ಲಿ ಅತಿಕ್ರಮಣದಾರರ ಪರವಾಗಿ ವಾದ ಮಂಡಿಸಲು ಅರ್ಜಿ ಸಲ್ಲಿಸಿ, ಸದ್ರಿ ಅರ್ಜಿಯು ಸಹಿತ ಸುಫ್ರಿಂ ಕೋರ್ಟ ಸ್ವೀಕರಿಸಿರುವುದು ವಿಶೇಷವಾಗಿದ್ದು ಇರುತ್ತದೆ. ಅಂತಿಮ
ವಿಚಾರಣೆಯಲ್ಲಿ ಹೋರಾಟಗಾರರ ವೇದಿಕೆಯ ಹಿರಿಯ ನ್ಯಾಯವಾದಿಗಳು ಅತಿಕ್ರಮಣದಾರರ ಪರವಾಗಿ ವಾದ ಮಂಡಿಸಲಾಗುವುದೆAದು ಅವರು ಹೇಳಿದರು.
ರಾಜ್ಯ ಸರಕಾರ ಒಕ್ಕಲೆಬ್ಬಿಸುವುದಾಗಿ ಪ್ರಮಾಣ ಪತ್ರ :
ಸರ್ವೋಚ್ಛ ನ್ಯಾಯಾಲಯದಲ್ಲಿ ಜರಗುತ್ತಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಪ್ರಕರಣದಲ್ಲಿ ರಾಜ್ಯ ಸರಕಾರವು ತೀರಸ್ಕರವಾಗಿರುವ ಅತಿಕ್ರಮಣದಾರರನ್ನ ಹಂತಹAತವಾಗಿ ಒಕ್ಕಲೆಬ್ಬಿಸಲಾಗುವುದೆಂದು ಈಗಾಗಲೇ
ಸುಫ್ರೀಂ ಕೋರ್ಟನಲ್ಲಿ ಪ್ರಮಾಣ ಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅರಣ್ಯವಾಸಿಗಳ ಪರವಾಗಿ ರಾಜ್ಯ ಸರಕಾರಕ್ಕೆ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸಲು ಹೋರಾಟಗಾರರ ವೇದಿಕೆಯು ರಾಜ್ಯ ಸರಕಾರಕ್ಕೆ ಒತ್ತಾಯಿಸಿದಾಗಲೂ ಅರಣ್ಯವಾಸಿಗಳ ಪರವಾಗಿ ತಿದ್ದುಪಡಿ ಪ್ರಮಾಣ ಪತ್ರ ಇಂದಿನವರೆಗೂ ರಾಜ್ಯ ಸರಕಾರ ಸಲ್ಲಿಸಿದ್ದು ಇರುವುದಿಲ್ಲ
ಎಂದು ರವೀಂದ್ರ ನಾಯ್ಕ ವಿಷಾದ ವ್ಯಕ್ತಪಡಿಸಿದರು.

error: