April 26, 2024

Bhavana Tv

Its Your Channel

ರಂಗ ಭೂಮಿ ಕಲಾವಿದ ಮಂಡ್ಯ ರಮೇಶ ನೇತೃತ್ವದ ಮೈಸೂರಿನ ನಟನ ರಂಗಶಾಲೆಯ ಒಂದು ವರ್ಷದ ರಂಗಭೂಮಿ ಡಿಪ್ಲೊಮಾ 2023-24 ಪ್ರವೇಶ ಪ್ರಕ್ರಿಯೆ ಆರಂಭಿಸಲಾಗಿದೆ

ಶಿರಸಿ: ಉತ್ತರ ಕನ್ನಡದ ಶಿರಸಿಯ ಅಳಿಯ, ಪ್ರಸಿದ್ಧ ನಟ, ರಂಗ ಭೂಮಿ ಕಲಾವಿದ ಮಂಡ್ಯ ರಮೇಶ ನೇತೃತ್ವದ ಮೈಸೂರಿನ ನಟನ ರಂಗಶಾಲೆಯ ಒಂದು ವರ್ಷದ ರಂಗಭೂಮಿ ಡಿಪ್ಲೊಮಾ 2023-24 ಪ್ರವೇಶ ಪ್ರಕ್ರಿಯೆ ಆರಂಭಿಸಲಾಗಿದೆ.
ಪ್ರವೇಶ ಪ್ರಕ್ರಿಯೆ ಹಾಗೂ ಸಂದರ್ಶನ ಜೂನ್ 11ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರ ತನಕ ಮೈಸೂರಿನ ರಾಮಕೃಷ್ಣ ನಗರದ ಕೆ ಬ್ಲಾಕ್ ನಲ್ಲಿ ಇರುವ ನಟನ ರಂಗಶಾಲೆಯಲ್ಲಿ ನಡೆಯಲಿದೆ. ಮಂಡ್ಯ ರಮೇಶ್ ನೇತೃತ್ವದ ನಟನ ರಂಗಶಾಲೆಯು ಕಳೆದ ಅನೇಕ ವರ್ಷಗಳಿಂದ ರಂಗಭೂಮಿಯಲ್ಲಿ ನಿರಂತರ ಕ್ರಿಯಾಶೀಲವಾಗಿದ್ದು ರಂಗಭೂಮಿಯ ಅಧ್ಯಯನ, ಪ್ರಾತ್ಯಕ್ಷಿಕೆ, ಪ್ರಯೋಗ, ಪ್ರದರ್ಶನಗಳ ಮೂಲಕ ಶ್ರೇಷ್ಠತೆಯನ್ನು ಸಾಧಿಸುವುದರತ್ತ ಸತತವಾಗಿ ಪ್ರಯತ್ನ ಶೀಲವಾಗಿದೆ.
ತನ್ನ ಚಟುವಟಿಕೆಯ ಭಾಗವಾಗಿ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯದ ಮಾನ್ಯತೆಯಡಿಯಲ್ಲಿ 16ರಿಂದ 30ವರ್ಷದ ಒಳಗಿನ ಆಸಕ್ತ ಯುವಕ ಯುವತಿಯರಿಗೆ ಒಂದು ವರ್ಷದ ರಂಗಭೂಮಿ ಡಿಪ್ಲೊಮಾ ಕೋರ್ಸ್ ಅನ್ನು ನಡೆಸುತ್ತಿದ್ದು, 2023-24ನೇ ಸಾಲಿನ ಪ್ರವೇಶಕ್ಕೆ ಮುಂದಾಗಿದೆ.
ಪ್ರತಿ ದಿನ ಸಂಜೆ 5.30ರಿಂದ 9ರ ವರೆಗೆ ತರಗತಿಗಳು ನಡೆಯಲಿದ್ದು, ಅಭಿನಯ, ರಂಗ ಸಿದ್ಧಾಂತ, ರಂಗ ಸಂಗೀತ, ಆಂಗಿಕ ಚಲನೆ, ಧ್ವನಿ ಬಳಕೆ, ಪ್ರಸಾಧನ, ಬೆಳಕು, ರಂಗ ವಿನ್ಯಾಸ, ಪರಿಕರ ನಿರ್ಮಾಣ, ರಂಗ ಇತಿಹಾಸ, ನಾಟಕ ತಯಾರಿ, ಪ್ರದರ್ಶನ.. ಹೀಗೆ ರಂಗಭೂಮಿಯ ಬೇರೆ ಬೇರೆ ಆಯಾಮಗಳ ಪರಿಚಯಾತ್ಮಕ ಪ್ರಾಯೋಗಿಕ ತರಗತಿಗಳು ನಡೆಯಲಿದೆ. ಕಳೆದ ಅನೇಕ ವರ್ಷಗಳಿಂದ ಕರ್ನಾಟಕದ ಬೇರೆ ಬೇರೆ ಭಾಗಗಳಿಂದ ವಿದ್ಯಾರ್ಥಿಗಳು ಆಗಮಿಸಿ ನಟನ ರಂಗಶಾಲೆಯಲ್ಲಿ ತರಬೇತಿ
ಪಡೆಯುತ್ತಿದ್ದಾರೆ.
ನಟನ ರಂಗಶಾಲೆಯಲ್ಲಿ ತರಬೇತಿ ಪಡೆದ ಸುಮಾರು 500ಕ್ಕೂ ಹೆಚ್ಚು ಕಲಾವಿದರು ದೇಶದಾದ್ಯಂತ ವಿವಿಧ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿದ್ದಾರೆ.
ಆಯ್ಕೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದAದೇ ಸಂದರ್ಶನದಲ್ಲಿ ಭಾಗವಹಿಸಬೇಕಾಗಿದೆ. ರಂಗಭೂಮಿಯನ್ನು ಗಂಭೀರವಾಗಿ
ಅಭ್ಯಸಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್ www. natanamysuru.org
ಅಥವಾ ಕಛೇರಿಯಲ್ಲಿ ನಿಗದಿತ ಶುಲ್ಕ ಪಾವತಿಸಿ ಅರ್ಜಿ ಪಡೆದು ಅಂಚೆ ಮುಖಾಂತರ ಅಥವಾ
ನೇರವಾಗಿ ತಲುಪಿಸಬೇಕು. ಆಡಿಷನ್ ಮತ್ತು ಪ್ರವೇಶಾತಿ
ಹೆಚ್ಚಿನ ಮಾಹಿತಿಗಾಗಿ 7259537777, 9480468327, 9845595505 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

ನಟನದಲ್ಲಿ ನಟನೆಯೇ ರಾಜ ಧರ್ಮ. ನಟನೆಗೆ ಬೇಕಾದ ಅವಕಾಶ, ಆವರಣ ಎಲ್ಲ ಇಲ್ಲಿದೆ. ವಿದ್ಯಾರ್ಥಿಗಳಿಗೆ, ಉದ್ಯೋಗದಲ್ಲಿ ಇರುವವರಿಗೂ ಈ ಡಿಪ್ಲೊಮ ಅನುಕೂಲ ಆಗಲಿದೆ.
ಡಾ.ಶ್ರೀಪಾದ ಭಟ್ಟ, ರಂಗ ತಜ್ಞರು

error: