May 6, 2024

Bhavana Tv

Its Your Channel

ಉಸ್ತುವಾರಿ ಸಚಿವರರಿಂದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ

ಯಲ್ಲಾಪುರ : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ ಅವರು ಪಟ್ಟಣದ ಅರಣ್ಯ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಲೋಕೋಪಯೋಗಿ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು, ನೆರೆಯಿಂದ ಜಿಲ್ಲೆಯಾದ್ಯಂತ ಉಂಟಾಗಿರುವ ಹಾನಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಮಾನ್ಯ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ ಅವರು ನಿನ್ನೆ ಲೋಕೋಪಯೋಗಿ ಸಚಿವರು ಹಾಗೂ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಅವರೊಂದಿಗೆ ದೂರವಾಣಿ ಮೂಲಕವಾಗಿ ಮಾತನಾಡಿ ಜಿಲ್ಲೆಯಲ್ಲಿ ಉಂಟಾಗಿರುವ ಹಾನಿಗಳ ಬಗ್ಗೆ ತಿಳಿಸಿ ತುರ್ತಾಗಿ ರಾಜ್ಯ ಮಟ್ಟದ ತಂಡವನ್ನು ಜಿಲ್ಲೆಗೆ ಕಳುಹಿಸುವಂತೆ ವಿನಂತಿಸಿದ್ದರು.
ಅದರAತೆ ಇಂದು ರಾಜ್ಯ ಲೋಕೋಪಯೋಗಿ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ತಂಡದೊAದಿಗೆ ಮಾನ್ಯ ಸಚಿವರು ಅರಬೈಲ, ಗುಳ್ಳಾಪುರ ,ಕಳಚೆ ಹಾಗೂ ನೆರೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಹಾನಿಗೊಳಗಾದ ರಸ್ತೆ ಹಾಗೂ ಸೇತುವೆ ನಿರ್ಮಾಣ ಮಾಡುವ ಕುರಿತು ರೂಪರೇಷೆಗಳನ್ನು ಸಿದ್ದಪಡಿಸಿ ರಸ್ತೆ ನಿರ್ಮಾಣ ಮಾಡುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಲುವಂತೆ ಹಾಗೂ ಶೀಘ್ರವಾಗಿ ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾರ್ಯದರ್ಶಿ ಕ್ರಷ್ಣ ರೆಡ್ಡಿ, ಲೋಕೋಪಯೋಗಿ ಮುಖ್ಯ ಇಂಜಿನಿಯರ ಎಸ್.ಎಫ್.ಪಾಟೀಲ, ರಾಷ್ಟ್ರೀಯ ಹೆದ್ದಾರಿ ಮುಖ್ಯ ಇಂಜಿನಿಯರ ಗೋವಿಂದರಾಜು ಶಿರಸಿ ವಿಭಾಗದ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ ಕೃಷ್ಣ ರೆಡ್ಡಿ ಹಾಗೂ ಕಾರವಾರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ದೇವಿದಾಸ್ ಚೌಹಾನ್ಹಾಗೂ ಸಹಾಯ ಅಭಿಯಂತರರು ಹಾಗೂ ಅಧಿಕಾರಿಗಳು, ತಹಶೀಲ್ದಾರ ಶ್ರೀಕೃಷ್ಣ ಕಾಮ್ಕರ ಪ್ರಮುಖರಾದ ವಿಜಯ ಮಿರಾಶಿ, ಗಣಪತಿ ಮುದ್ದೇಪಾಲ , ಪೋಲಿಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು..
ವರದಿ: ವೇಣುಗೋಪಾಲ ಮದ್ಗುಣಿ. ಯಲ್ಲಾಪುರ.

error: