May 21, 2024

Bhavana Tv

Its Your Channel

ಅತಿವೃಷ್ಟಿಯಿಂದ ಹಾನಿಗೊಳಗಾದ ಕಳಚೆ ಭಾಗದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

ಯಲ್ಲಾಪುರ : ಅತಿವೃಷ್ಟಿಯಿಂದ ಹಾನಿಗೊಳಗಾದ ಯಲ್ಲಾಪುರ ತಾಲೂಕಿನ ಕಳಚೆ ಭಾಗದ ಪ್ರದೇಶಗಳಿಗೆ ಮಾನ್ಯ ಮುಖ್ಯಮಂತ್ರಿ ಗಳಾದ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು

ಶಾಸಕರಾದ ಶಿವರಾಮ ಹೆಬ್ಬಾರ ಅವರು ಮುಖ್ಯಮಂತ್ರಿಗಳಿಗೆ ಹಾನಿಗೊಳಗಾದ ಪ್ರದೇಶಗಳ ಸಂಪೂರ್ಣ ಮಾಹಿತಿ ನೀಡಿದರು, ಸಂತ್ರಸ್ತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ತಿಳಿಸಿದರು. ಈ ಭಾಗದಲ್ಲಿ ಮೂಲಭೂತ ಸೌಕರ್ಯಗಳ ಪುನರ್ನಿರ್ಮಾಣಕ್ಕಾಗಿ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವುದರ ಜೊತೆಯಲ್ಲಿ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರದಲ್ಲೇ ಪರಿಹಾರವನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು.ತುರ್ತಾಗಿ ರಾಜ್ಯದ ಮುಖ್ಯಮಂತ್ರಿಗಳನ್ನು ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ಕೂಡಲೇ ಕರೆದುಕೊಂಡ ಬಂದಿರುವ ಶಾಸಕರಾದ ಶಿವರಾಮ ಹೆಬ್ಬಾರ ಅವರ ಕಾರ್ಯವೈಖರಿಯ ಬಗ್ಗೆ ಗ್ರಾಮಸ್ಥರು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಸುನಿಲ ನಾಯ್ಕ,ದಿನಕರ ಶೆಟ್ಟಿ,ಕ.ರಾ.ರಸಾ.ಸಂಸ್ಥೆಯ ಅಧ್ಯಕ್ಷರಾದ ವಿ.ಎಸ್.ಪಾಟೀಲ ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು ಕಾರ್ಯಕರ್ತರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.


ವರದಿ:- ವೇಣುಗೋಪಾಲ ಮದ್ಗುಣಿ

error: