May 17, 2024

Bhavana Tv

Its Your Channel

ಯಲ್ಲಾಪುರ ತಾಲೂಕಿನ ನೆರೆ ಪೀಡಿತ ಪ್ರದೇಶವಾದ ಗುಳ್ಳಾಪುರಕ್ಕೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಯಲ್ಲಾಪುರ::- ಉತ್ತರ ಕನ್ನಡ ಜಿಲ್ಲೆಯ ಹಲವಾರು ಭಾಗಗಳಲ್ಲಿ ಪ್ರತಿ ವರ್ಷ ನೆರೆ ಹಾವಳಿಯಿಂದ ಜನರು ಸಾಕಷ್ಟು ತೊಂದರೆ ಅನುಭವಿಸುತ್ತಿರುವುದು ಕಂಡು ಬಂದಿದ್ದು ಜನರಿಗೆ ಬೇರೆ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವುದೇ ಶಾಶ್ವತ ಪರಿಹಾರವಾಗಿದೆ. ಈ ಕುರಿತು ಸದನದಲ್ಲಿ ಸರ್ಕಾರಕ್ಕೆ ಒತ್ತಾಯ ಮಾಡುವ ಮೂಲಕ ಜನರ ಸಮಸ್ಯೆಗಳನ್ನು ಎತ್ತಿ ಹಿಡಿಯಲಾಗುವುದು. ಎಂದು ವಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.ಶಾಸಕರೆಲ್ಲ ಅಧಿಕಾರಕ್ಕಾಗಿ ಕಚ್ಚಾಡುತ್ತಿದ್ದಾರೆ.
ಯಲ್ಲಾಪುರ ತಾಲೂಕಿನ ನೆರೆ ಪೀಡಿತ ಪ್ರದೇಶವಾದ ಗುಳ್ಳಾಪುರಕ್ಕೆ ಭೇಟಿ ನೀಡಿ ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿದ ಅವರು ೨೦೧೯ ರಲ್ಲಿ ಸಂಭವಿಸಿದ ನೆರೆ ಹಾನಿಯ ಪರಿಹಾರ ಇದುವರೆಗೆ ಸರಿಯಾಗಿ ನೀಡಲಾಗಿಲ್ಲ ಈ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲಾಗುವುದು ಹಾಗೂ ಈ ವರ್ಷದ ಪರಿಹಾರ ಅತಿ ಶೀಘ್ರ ಬಿಡುಗಡೆ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಢ ನಾಯ್ಕ, ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಮಾಜಿ ಶಾಸಕ ಸತೀಶ ಸೈಲ, ಕೆ.ಪಿ.ಸಿ.ಸಿ ಸದಸ್ಯ ಪ್ರಶಾಂತ ದೇಶಪಾಂಡೆ, ತಾಲೂಕು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿ.ಎನ್ ಗಾಂವಕರ, ದಿನಾಂಕ ದೊಡ್ಡುರ,ನಂದನ ಬಾಳಗಿ, ಶಂಭು ಶೆಟ್ಟಿ,ವಕ್ತಾರರಾದ ರವಿ ನಾಯ್ಕ ಪೂಜಾ ನೇರ್ತೆಕರ ಸರಸ್ವತಿ ಗುನಗ,ಎನ್ ಕೆ.ಭಟ್ಟ ಮೆಣಸುಪಾಲ,
ವರದಿ:- ವೇಣುಗೋಪಾಲ ಮದ್ಗುಣಿ

error: