May 17, 2024

Bhavana Tv

Its Your Channel

ಶಾಲೆ ಪ್ರಾರಂಭವಾದ ಹಿನ್ನೆಲೆ ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರ ಕಾಳಮ್ಮನಗರ ಸರ್ಕಾರಿ ಪ್ರೌಢಶಾಲೆಗೆ ಭೇಟಿ

ಯಲ್ಲಾಪುರ : ರಾಜ್ಯದಲ್ಲಿ ಹಂತ ಹಂತವಾಗಿ ಶಾಲೆಯನ್ನು ಪ್ರಾರಂಭಿಸಲಾಗುತ್ತಿದ್ದು ಇಂದಿನಿAದ ೯ ರಿಂದ ೧೨ ನೇ ತರಗತಿ ಆರಂಭವಾಗಿದೆ.ಈ ಹಿನ್ನೆಲೆಯಲ್ಲಿ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ ಅವರು ಇಂದು ಪಟ್ಟಣದ ಕಾಳಮ್ಮನಗರದ ಸರಕಾರಿ ಪ್ರೌಢಶಾಲಾ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದರು, ವಿದ್ಯಾರ್ಥಿಗಳಿಗೆ ಸುರಕ್ಷತೆಗಾಗಿ ಕೈಗೊಂಡ ಮುಂಜಾಗ್ರತಾ ಕ್ರಮಗಳ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಪ್ರೋತ್ಸಾಹ ನೀಡಿದರು.ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಜೊತೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿಸುವಂತೆ ಸೂಚಿಸಿದರು, ಸರಕಾರ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಎಲ್ಲಾ ರೀತಿಯ ಸುರಕ್ಷಾ ಕ್ರಮವನ್ನು ತೆಗೆದುಕೊಂಡಿದೆ ಯಾವುದೇ ಆತಂಕ ಇಲ್ಲದೆ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಪಾಲಕರಿಗೆ ಮನವಿಮಾಡಿದರು .
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಹಾಗೂ
ಬಿಜೆಪಿ ಮಂಡಲ ಉಪಾಧ್ಯಕ್ಷರಾದ ಶಿರಿಷ ಪ್ರಭು, ಪ.ಪಂ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಅಮಿತ ಅಂಗಡಿ, ಪ್ರಮುಖರಾದ ಗಣಪತಿ ಮುದ್ದೆಪಾಲ ಹಾಗೂ ಶಾಲಾ ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕರು ಹಾಜರಿದ್ದರು.

ವರದಿ: ವೇಣುಗೋಪಾಲ ಮದ್ಗುಣಿ

error: