May 17, 2024

Bhavana Tv

Its Your Channel

ಯಲ್ಲಾಪುರದಲ್ಲಿ ಕರ್ನಾಟಕ ಜರ್ನಲಿಸ್ಟ್ ಯುನಿಯನ್ ಶಾಖೆ ಆರಂಭ

ವರದಿ:ವೇಣುಗೋಪಾಲ ಮದ್ಗುಣಿ. ಯಲ್ಲಾಪುರ

ಯಲ್ಲಾಪುರ,ಆ.೨೫ : ಮಾಧ್ಯಮಗಳೂ ಸೇರಿದಂತೆ ಯಾವುದೇ ಸಂಘಟನೆಗಳು ಆರಂಭದಲ್ಲಿ ಇಟ್ಟುಕೊಂಡ ಕ್ರಿಯಾಶೀಲತೆ ಹಾಗೂ ಮಹತ್ವಾಕಾಂಕ್ಷೆಗಳನ್ನು ತೊರೆಯದೇ, ಸಮಾಜಕ್ಕೆ ಉಪಯುಕ್ತವಾದ ಕೊಡುಗೆಗಳನ್ನು ನೀಡುವಂತಿರಬೇಕು. ಹೊರತಾಗಿ ಸಂಕುಚಿತ ಮನೋಭಾವದಿಂದ ಯಾವುದೇ ಸಾಧನೆಗಳನ್ನು ಮಾಡುವುದು ಸಾಧ್ಯ ಎಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಯಲ್ಲಾಪುರ ಘಟಕದ ಅಧ್ಯಕ್ಷ ಶಂಕರ ಭಟ್ಟ ತಾರೀಮಕ್ಕಿ ಹೇಳಿದರು.
ಅವರು ಆ.೨೫ ರಂದು ಪಟ್ಟಣದ ಶಿರಸಿ ರಸ್ತೆಯ `ಸಂಸ್ಕೃತಿ’ ಸಭಾಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಇಂಡಿಯನ್ ಫೆಡರೇಶನ್ ಆಫ್ ವರ್ಕಿಂಗ್ ಜರ್ನಲಿಸ್ಟ್ ಇದರ ಸಹಯೋಗ ಸಂಸ್ಥೆಯಾಗಿರುವ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯಿಂದ ನೋಂದಾಯಿತ ಸಂಸ್ಥೆಯಾಗಿದ್ದು, ಆ.೨೯ ರಂದು ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ಪಟ್ಟಣದ ಎಪಿಎಂಸಿ ರೈತ ಸಭಾಭವನದಲ್ಲಿ ಯಲ್ಲಾಪುರ ಘಟಕದ ಉದ್ಘಾಟನೆಯನ್ನು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ನೆರವೇರಿಸುವರು. ನೂತನ ಘಟಕದ ಆಮಂತ್ರಣ ಪತ್ರಿಕೆಯನ್ನು ಅನಾವರಣಗೊಳಿಸಿದರು.
ಕಳೆದ ಮುರ್ನಾಲ್ಕು ವರ್ಷಗಳಿಂದ ನಡೆಸಲಾದ ವಿದ್ಯಮಾನಗಳು ನೂತನ ಸಂಘಟನೆಯ ಹುಟ್ಟಿಗೆ ಕಾರಣವಾಗಿದ್ದು, ನಾವು ಸಾಧ್ಯವಿದ್ದಷ್ಟು ಸಾಮಾಜಿಕವಾಗಿ, ಅನ್ಯೋನ್ಯತೆಯಿಂದ ನಡೆಯಬೇಕೆಂದು ನಿರ್ಣಯಿಸಿದ್ದೇವೆ ಎಂದು ಮಾಹಿತಿ ನೀಡಿದರು.
ಕೆಜೆಯು ರಾಜ್ಯಾಧ್ಯಕ್ಷ ನಾರಾಯಣ ಬಿ. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಪತ್ರಕರ್ತ ಹರಿಪ್ರಕಾಶ ಕೋಣೆಮನೆ ದಿಕ್ಸೂಚಿ ಭಾಷಣ ಮಾಡಲಿರುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ ಸದಸ್ಯ ಶಾಂತಾರಾಮ ಸಿದ್ದಿ, ಪಂಚಾಯತ್ ರಾಜ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ರಾಜ್ಯ ಉಪಾಧ್ಯಕ್ಷ ಪ್ರಮೋದ ಹೆಗಡೆ, ಎಪಿಎಂಸಿ ಅಧ್ಯಕ್ಷ ಎಂ.ಜಿ.ಭಟ್ಟ ಸಂಕದಗುAಡಿ ಪಾಲ್ಗೊಳ್ಳುವರು.
ಪ.ಪಂ ಅಧ್ಯಕ್ಷೆ ಸುನಂದಾ ದಾಸ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವೇಣುಗೋಪಾಲ ಮದ್ಗುಣಿ, ಡಿಸಿಎಫ್ ಗೋಪಾಲಕೃಷ್ಣ ಹೆಗಡೆ, ತಹಶೀಲ್ದಾರ ಶ್ರೀಕೃಷ್ಣ ಕಾಮ್ಕರ್, ಕೆಜೆಯು ಜಿಲ್ಲಾಧ್ಯಕ್ಷ ಮನಮೋಹನ ನಾಯ್ಕ, ತಾ.ಪಂ ಕಾ.ನಿ.ಅಧಿಕಾರಿ ಜಗದೀಶ ಕಮ್ಮಾರ, ಬಿಇಓ ಎನ್.ಆರ್.ಹೆಗಡೆ, ಸಿಪಿಐ ಸುರೇಶ ಯಳ್ಳೂರು, ಲೋಕೋಪಯೋಗಿ ಇಲಾಖೆಯ ಅಭಿಯಂತರ ವಿ.ಎಂ.ಭಟ್ಟ, ತಾಲೂಕಾ ಆರೋಗ್ಯಾಧಿಕಾರಿ ಡಾ|| ನರೇಂದ್ರ ಪವಾರ, ಪ.ಪಂ ಮುಖ್ಯಾಧಿಕಾರಿ ಅರುಣ ನಾಯ್ಕ, ನಿವೃತ್ತ ತಹಶೀಲ್ದಾರ ಡಿ.ಜಿ.ಹೆಗಡೆ, ಟಿಎಂಎಸ್ ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ, ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ರವಿ ಹೆಗಡೆ ಅಧ್ಯಕ್ಷ ಮುರಳಿ ಹೆಗಡೆ, ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ, ಡಿ.ಎನ್.ಗಾಂವ್ಕರ, ವಿಜಯ ಮಿರಾಶಿ, ಉದ್ಯಮಿ ಬಾಲಕೃಷ್ಣ ನಾಯಕ, ಪ್ರಾ.ಶಾ.ಶಿ.ಸಂಘದ ಜಿಲ್ಲಾಧ್ಯಕ್ಷ ನಾರಾಯಣ ನಾಯಕ, ಆರ್.ಆರ್.ಭಟ್ಟ, ಕಾ.ನಿ.ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್.ಭಟ್ಟ, ಕಾರ್ಯದರ್ಶಿ ಶ್ರೀಧರ ಅಣಲಗಾರ ಉಪಸ್ಥಿತರಿರುವರು ಎಂದು ವಿವರಿಸಿದರು.
ಇದೇ ಸಂದರ್ಭದಲ್ಲಿ ತಾಲೂಕಿನ ಹಿರಿಯ ಪತ್ರಕರ್ತರಾದ ಎನ್.ಎಸ್.ಹೆಗಡೆ ಕುಂದರಗಿ, ಪದ್ಮಾಕರ ಫಾಯ್ದೆ ಮಂಚಿಕೇರಿ, ಅನಂತ ವೈದ್ಯ, ವನರಾಗ ಶರ್ಮಾ, ಶ್ರೀರಂಗ ಕಟ್ಟಿ, ಬೀರಣ್ಣ ನಾಯಕ ಮೊಗಟಾ ಇವರಿಗೆ ಗೌರವ ಸನ್ಮಾನ ಹಮ್ಮಿಕೊಳ್ಳಲಾಗಿದೆಯಲ್ಲದೇ, ಮಧ್ಯಾಹ್ನ ೩ ಗಂಟೆಯಿoದ ತಾಲೂಕಾ ಮಟ್ಟದ ಬಾಲಕೃಷ್ಣ ಮತ್ತು ರಾಧಾಕೃಷ್ಣ ವೇಷದ ಸ್ಪರ್ಧಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ತಾಲೂಕಾ ಘಟಕದ ಉಪಾಧ್ಯಕ್ಷ ವಿಶ್ವೇಶ್ವರ ಗಾಂವ್ಕರ, ಪ್ರಧಾನ ಕಾರ್ಯದರ್ಶಿ ನಾಗೇಶಕುಮಾರ ಎನ್., ಮತ್ತಿತರ ಸದಸ್ಯರು ಉಪಸ್ಥಿತರಿದ್ದರು. ಶಂಕರ ಭಟ್ಟ ತಾರೀಮಕ್ಕಿ ಸುದ್ದಿಗೋಷ್ಠಿಯಲ್ಲಿ ಘಟಕದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಅನಾವರಣಗೊಳಿಸಿದರು.

error: