May 17, 2024

Bhavana Tv

Its Your Channel

ಕೋವಿಡ್ ಲಸಿಕೆ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳಿಗೆ ೩೧೨ ಕೋಟಿ ಹಣ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ನಿಧಿ ಬಳಕೆ – ಸಿಐಟಿಯು ರಾಜ್ಯ ಉಪಾಧ್ಯಕ್ಷರಾದ ಹರೀಶ ನಾಯ್ಕ ಖಂಡನೆ

ವೇಣುಗೋಪಾಲ ಮದ್ಗುಣಿ. ಯಲ್ಲಾಪುರ

ಯಲ್ಲಾಪುರ :- ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ೪೦ ಲಕ್ಷ ಕೋವಿಡ್ ಲಸಿಕೆಗಳನ್ನು ನೀಡುವ ನೆಪದಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿಯಿoದ ಖಾಸಗಿ ಆಸ್ಪತ್ರೆಗಳಿಗೆ ೩೧೨ ಕೋಟಿ ರೂಪಾಯಿಗಳನ್ನು ಧಾರೆ ಎರೆಯಲು ಹೊರಟಿದ್ದಾರೆ. ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕೈಗೊಂಡಿರುವ ಈ ಕ್ರಮವನ್ನು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್(ರಿ) ಸಿಐಟಿಯು ರಾಜ್ಯ ಉಪಾಧ್ಯಕ್ಷರಾದ ಹರೀಶ ನಾಯ್ಕರವರು ತೀವ್ರವಾಗಿ ಖಂಡಿಸಿದ್ದಾರೆ. ಅವರು ಯಲ್ಲಾಪುರದ ಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಕೂಡಲೇ ಸರ್ಕಾರ ಈ ತೀರ್ಮಾನವನ್ನು ಹಿಂಪಡೆಯಬೇಕೆoದು ಆಗ್ರಹಿಸಿದ್ದಾರೆ
ಕಾರ್ಮಿಕ ಸಚಿವರು ಖಾಸಗಿ ಆಸ್ಪತ್ರೆಗಳ ಮಾಲಿಕರೊಂದಿಗೆ ಸಭೆ ನಡೆಸಿ ಪ್ರತಿ ಲಸಿಕೆಗೆ ೭೮೦ ರೂಪಾಯಿ ದರದಲ್ಲಿ ರಾಜ್ಯದ ೩೦ ಲಕ್ಷ ನೋಂದಾಯಿತ ಕಾರ್ಮಿಕರಿಗೆ ಹಾಗೂ ೧೦ ಲಕ್ಷ ವಲಸೆ ಕಾರ್ಮಿಕರಿಗೆ ಲಸಿಕೆ ನೀಡುವ ತೀರ್ಮಾನ ಕೈಗೊಂಡಿರುವುದು ಮಂಡಳಿಯ ನಿಧಿಯನ್ನು ಖಾಲಿ ಮಾಡುವ ಹುನ್ನಾರವಾಗಿದೆ. ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ನಿಧಿಯನ್ನು ಕಾರ್ಮಿಕ ಸಚಿವರು ಹಾಗೂ ಮಂಡಳಿ ಅಧಿಕಾರಿಗಳ ಕೂಟವು ದುರ್ಬಳಕೆ ಮಾಡಿಕೊಳ್ಳಲು ಇಂತಹ ಪ್ರಯತ್ನ ನಡೆಸಿದೆ.
ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯು ದೇಶಾದ್ಯಾಂತ ಎಲ್ಲ ನಾಗರಿಕರಿಗೂ ಉಚಿತವಾಗಿ ಕೋವಿಡ್ ಲಸಿಕೆಗಳನ್ನು ವಿತರಿಸುತ್ತಿದೆ. ಕರ್ನಾಟಕದಲ್ಲೂ ನಿರ್ಮಾಣ ವಲಯದ ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರು ಹಾಗೂ ವಲಸೆ ಕಾರ್ಮಿಕರು ಮೊದಲನೆ ಹಾಗೂ ಎರಡನೇ ಡೋಸ್‌ಗಳನ್ನು ಉಚಿತವಾಗಿ ಪಡೆಯುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಶೇ.೫೦ ಜನರು ಲಸಿಕೆ ಪಡೆದಿರುವುದಾಗಿ ಸರ್ಕಾರ ಹೇಳಿದೆ. ಹೀಗಿದ್ದೂ ಖಾಸಗಿ ಆಸ್ಪತ್ರೆಗಳಿಂದ ಲಸಿಕೆ ಖರೀದಿಸುವ ಅಗತ್ಯವಾದರೂ ಏನಿದೆ ಎಂದು ಸಿಐಟಿಯು ಪ್ರಶ್ನಿಸಿದೆ.
ಈಗಾಗಲೇ ರೇಷನ್ ಕಿಟ್, ಟೂಲ್ ಕಿಟ್, ಬೂಸ್ಟಪ್ ಕಿಟ್ ಹಾಗೂ ಸುರಕ್ಷಾ ಕಿಟ್, ಹೊಸ ತಂತ್ರಾAಶ ಅಳವಡಿಕೆ ಹಾಗೂ ಕಂಪ್ಯೂಟರ್,ಇನೋವಾ ಕಾರ್ ಮತ್ತು ಟಿವಿಗಳ ಖರೀದಿಗಳಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆಸಲಾಗಿದೆ. ಅಲ್ಲದೆ ೨೦೨೧-೨೨ ಸಾಲಿನಲ್ಲಿ ೨೬೮೮.೯೦ ಕೋಟಿ ಮಂಡಳಿ ಹಣವನ್ನು ವಿವಿಧ ಬಾಬ್ತುಗಳಿಗೆ ಖರ್ಚು ಮಾಡಲು ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರದ ಕೆಪಿಟಿಟಿ ಕಾಯ್ದೆ ೧೯೯೯ ನ್ನು ಕಾರ್ಮಿಕ ಸಚಿವರು ಮತ್ತು ಮಂಡಳಿ ಹಿರಿಯ ಅಧಿಕಾರಿಗಳು ದುರ್ಬಳಕೆ ಮಾಡಿಕೊಂಡು ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ನಿಧಿಯನ್ನು ಮನಬಂದAತೆ ದುರುಪಯೋಗ ಮಾಡುತ್ತಿದ್ದಾರೆ.
ಕೊರೊನಾ ಕಾಲದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಅನ್ನ, ಆಹಾರ, ಆರೋಗ್ಯ, ಶಿಕ್ಷಣ ಮತ್ತು ಬದುಕಿನ ಭದ್ರತೆ ಒದಗಿಸುವುದು ಕೇಂದ್ರ ಮತ್ತು ರಾಜ್ಯಗಳ ಕೆಲಸವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ರಾಜ್ಯ ಸರ್ಕಾರ ಇದಕ್ಕಾಗಿ ಖಜಾನೆಯಿಂದ ಖರ್ಚು ಮಾಡುವ ಬದಲು, ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಮೂಲಕ ಸಾವಿರಾರು ಕೋಟಿ ಹಣವನ್ನು ಖರ್ಚು ಮಾಡಿಸುತ್ತಿದೆ. ಇದೇ ಅವಕಾಶವನ್ನು ಬಳಸಿಕೊಂಡು ಕಾರ್ಮಿಕ ಸಚಿವರು ಹಾಗೂ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕೋಟ್ಯಾಂತರ ಹಣ ಲೂಟಿ ಹೊಡೆಯುತ್ತಿದ್ದಾರೆ.
ಇದು ಬಡ ಕಾರ್ಮಿಕರ ಹೆಸರಲ್ಲಿ ನಡೆಸುತ್ತಿರುವ ಹಗಲು ದರೋಡೆಯಾಗಿದೆ. ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್(ರಿ) ಸಿಐಟಿಯು ಆಗ್ರಹಿಸಿದೆ. ೨೦ ಲಕ್ಷ ಆಹಾರ ಕಿಟ್ ಹಂಚಿರುವುದಾಗಿ ಮಂಡಳಿ ಹೇಳುತ್ತದೆ ಉ.ಕ ಜಿಲ್ಲೆಯಲ್ಲಿ ೧ ಲಕ್ಷಕ್ಕೂ ಹೆಚ್ಚು ನೋಂದಾಯಿತ ಕಾರ್ಮಿಕರಿದ್ದು, ೫೦% ಕಿಟ್ ಪೂರೈಕೆಯಾಗಿದೆ. ಕಾರ್ಮಿಕ ಇಲಾಖೆ ಮತ್ತು ಕಾರ್ಮಿಕ ಸಂಘವನ್ನು ಗಣನೆಗೆ ತೆಗೆದುಕೊಳ್ಳದೇ, ಎಮ್.ಎಲ್.ಎ ಎಮ್.ಎಲ್.ಸಿ ಮತ್ತು ಬಿಜೆಪಿ ಮುಖಂಡರು ತಮ್ಮ ಮನಬಂದAತೆ ಹಂಚುತ್ತಿದ್ದಾರೆ. ನೋಂದಾಯಿತ ಕಾರ್ಮಿಕರಿಗೆ ಆಹಾರ ಕಿಟ್ ಸಿಗುತ್ತಿಲ್ಲ. ಮಂತ್ರಿಗಳ ಮತಕ್ಷೇತ್ರವಾದ ಮುಂಡಗೋಡ ಮತ್ತು ಯಲ್ಲಾಪುರದ ನೋಂದಾಯಿತ ಕಾರ್ಮಿಕರಿಗೆ ಸರ್ಕಾರದಿಂದ ಕಿಟ್ ವಿತರಣೆ ಆಗಲಿಲ್ಲ. ಈ ಶ್ರಮ ಎಂಬ ಹೊಸ ಯೋಜನೆ ಜಾರಿಗೆ ತಂದಿರುವುದು ಸ್ವಾಗತಾರ್ಹ ಅಸಂಘಟಿತ ಕಾರ್ಮಿಕರಿಗೆ ಅರ್ಜುನ ಸೇನ್ ಗುಪ್ತಾರವರ ವರದಿಯಂತೆ ಜಿಡಿಪಿಯ ೩% ಮೀಸಲಿಟ್ಟರೆ ಮಾತ್ರ ಕಾರ್ಮಿಕರ ಪ್ರಯೋಜನೆ ಆಗಲಿದೆ. ಕಾರ್ಮಿಕ ಮಂಡಳಿಯ ಹಣ ಕಟ್ಟಡ ಕಾರ್ಮಿಕರ ಕಲ್ಯಾಣ ಯೋಜನೆಗೆ ಉಪಯೋಗಿಸಬೇಕೆ ಹೊರತು ಅನ್ಯ ಕೆಲಸಕ್ಕೆ ಉಪಯೋಗಿಸಬಾರದು ಖರೀದಿಯ ಬದಲು ನೇರ ನಗದು ವರ್ಗಾವಣೆ ಮಾಡಲು ಸಿ.ಐ.ಟಿ.ಯು ಒತ್ತಾಯಿಸುತ್ತದೆ ಎಂದರು.ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಸಮಿತಿಯ ಕೃಷ್ಣ ಭಟ್ಟ, ಚಂದ್ರಕಾoತ ಮರಾಠೆ, ಯಲ್ಲಾಪುರ ಸಮಿತಿಯ ಕಾರ್ಯದರ್ಶಿ ಶೇಷು ಕಲ್ಯಾಣಕರ ಉಪಸ್ಥಿತರಿದ್ದರು.

error: