May 17, 2024

Bhavana Tv

Its Your Channel

ಶಿಕ್ಷಕ ವೃತ್ತಿಯಷ್ಟು ಶ್ರೇಷ್ಠವಾದ ವೃತ್ತಿ ಇನ್ನೊಂದಿಲ್ಲ; ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ

ವರದಿ: ವೇಣುಗೋಪಾಲ ಮದ್ಗುಣಿ. ಯಲ್ಲಾಪುರ

ಯಲ್ಲಾಪುರ : ಪಟ್ಟಣದ ಅಡಿಕೆ ಭವನದಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರವರು, ಶಿಕ್ಷಕರ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್.೫ ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಅಂಕೋಲಾ ಅರ್ಬನ್ ಬ್ಯಾಂಕ್ ಯಲ್ಲಾಪುರ ಶಾಖೆ ಹಮ್ಮಿಕೊಂಡಿದ್ದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಿ, ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಮಾತನಾಡಿದರು.
ನಿವೃತ್ತರಾದರೂ ಕೂಡ ಶಿಕ್ಷಕರಿಗೆ ಗೌರವಿಸಲಾಗುತ್ತದೆ. ಈ ಗೌರವವನ್ನುಗಳಿಸಿ ಉಳಿಸಿಕೊಂಡು ಹೋಗುವುದು ಪ್ರತಿಯೊಬ್ಬ ಶಿಕ್ಷಕರ ಜವಾಬ್ದಾರಿಯಾಗಿದೆ. ನಿಮ್ಮಂತ ಆದರ್ಶ ಶಿಕ್ಷಕರು ನಮ್ಮ ಜಿಲ್ಲೆಯಲ್ಲಿರುವ ಕಾರಣಕ್ಕೆ ಜಗತ್ತಿನಾದ್ಯಂತ ನಮ್ಮ ಜಿಲ್ಲೆಯ ಪ್ರತಿಭೆಗಳು ಗುರುತಿಸಿಕೊಂಡಿದ್ದಾರೆ ಎಂದು ಹೇಳಿದರು.
ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯತ ಅಧ್ಯಕ್ಷರಾದ ಸುನಂದಾ ದಾಸ ವಹಿಸಿದ್ದರು. ವಿಧಾನ ಪರಿಷತ ಸದಸ್ಯರಾದ ಶಾಂತಾರಾಮ ಸಿದ್ದಿ, ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ, ಪಟ್ಟಣ ಪಂಚಾಯತದ ಉಪಾಧ್ಯಕ್ಷರಾದ ಶಾಮಲಿ ಪಾಟಣಕರ ಮಾತನಾಡಿದರು.
ತಹಶೀಲ್ದಾರ ಶ್ರೀಕೃಷ್ಣ ಕಾಮಕರ, ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ ಕಮ್ಮಾರ, ಅಂಕೋಲಾ ಅರ್ಬನ್ ಬ್ಯಾಂಕ್ ಅಧ್ಯಕ್ಷ ಭಾಸ್ಕರ ನಾರ್ವೇಕರ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಅಧಿಕಾರಿ ಶ್ರೀರಾಮ ಹೆಗಡೆ, ಶಿರಸಿ ಶೈಕ್ಷಣಿಕ ಜಿಲ್ಲೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ನಾಯಕ, ಮುಂತಾದವರು ವೇದಿಕೆಯಲ್ಲಿದ್ದರು.
ಇದೇ ಸಂದರ್ಭದಲ್ಲಿ ಸಿರ್ಸಿ ಶೈಕ್ಷಣಿಕ ಜಿಲ್ಲಾ ಉತ್ತಮ ಪ್ರಶಸ್ತಿ ವಿಜೇತ ಯಲ್ಲಾಪುರ ತಾಲೂಕಿನ ಶಿಗೇಕೇರಿ ಶಾಲೆಯ ನಾರಾಯಣ ಸೀತಾರಾಮ ಭಟ್ಟ, ಇಡಗುಂದಿ ಶಾಲೆಯ ಗಣಪತಿ ಹನುಮಂತ ಗೌಡ, ಮಲವಳ್ಳಿ ಪ್ರೌಡಶಾಲೆ ಸಂತೋಷ ಶೆಟ್ಟಿಯವರನ್ನು ಹಾಗೂ ಯಲ್ಲಾಪುರ ತಾಲೂಕು ಉತ್ತಮ ಶಿಕ್ಷಕರಾಗಿ ಆಯ್ಕೆಯಾದ ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕರಾದ ಕೆರೆ ಹೊಸಳ್ಳಿ ಶಾಲೆಯ ಬಲೀಂದ್ರ ಡಿ ಗೌಡ, ಆಗೇರ ಕಾಲೊನಿ ಶಾಲೆಯ ಶಿಕ್ಷಕಿ ನಮಿತಾ ಗಂಗಾಧರ ಭಂಡಾರಿ, ಕರಿಯವ್ವನಗುಂಡಿ ಶಾಲೆಯ ಶಿಕ್ಷಕಿ ಪದ್ಮಾವತಿ ಬನ್ಸೋಡೆ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಕಿರವತ್ತಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಸ್ ಬಿ ನಾಯ್ಕ, ವಿಶ್ವದರ್ಶನ ಪ್ರೌಢಶಾಲೆಯ ಶಿಕ್ಷಕಿ ಪ್ರೇಮಾ ಗಾಂವ್ಕರ ಇವರುಗಳನ್ನು ಸನ್ಮಾನಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಿವೃತ್ತರಾದ ೨೨ ಜನ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು, ಸೇವೆಯಲ್ಲಿರುವಾಗಲೇ ಆಕಸ್ಮಿಕವಾಗಿ ಮೃತಪಟ್ಟ ನಾಲ್ವರು ಶಿಕ್ಷಕರ ಸಂಬAಧಿಕರನ್ನು ಗೌರವಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿಯಾದ ಎನ್ ಆರ್ ಹೆಗಡೆ ಸ್ವಾಗತಿಸಿದರು, ಶಿಕ್ಷಕಿ ಮುಕ್ತಾ ಶಂಕರ ಪ್ರಾರ್ಥಿಸಿದರು. ವಿಶ್ವದರ್ಶನ ಶಾಲೆಯ ವಿದ್ಯಾರ್ಥಿಗಳು ನಾಡಗೀತೆಯನ್ನು ಹಾಡಿದರು. ಶಿಕ್ಷಕ ಚಂದ್ರಹಾಸ ನಾಯ್ಕ ನಿರೂಪಿಸಿದರು.

error: