May 17, 2024

Bhavana Tv

Its Your Channel

ಯಲ್ಲಾಪುರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನೋಟ್ ಬುಕ್ ವಿತರಣಾ ಕಾರ್ಯಕ್ರಮ.

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ಪ್ರತಿ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡುತ್ತಿದ್ದು ಅದರಂತೆ ವಿವೇಕ ಹೆಬ್ಬಾರವರು ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ” ನೋಟ್ ಬುಕ್ ” ಅನ್ನು ವಿತರಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜೊತೆಯಲ್ಲಿ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿನ ವಿದ್ಯಮಾನಗಳ ಬಗ್ಗೆ ಮಾಹಿತಿಯನ್ನು ಹೊಂದಿರಬೇಕು. ದಿನ ಪತ್ರಿಕೆ ಹಾಗೂ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು.
ಈ ಸಂದರ್ಭದಲ್ಲಿ ಪ.ಪಂ ಅಧ್ಯಕ್ಷರಾದ ಸುನಂದಾ ದಾಸ್, ಉಪಾಧ್ಯಕ್ಷರಾದ ಶ್ಯಾಮಿಲಿ ಪಾಟಣಕರ, ಮಂಡಲ ಉಪಾಧ್ಯಕ್ಷರಾದ ಶಿರಿಷ ಪ್ರಭು, ಯುವಮೋರ್ಚಾ ಅಧ್ಯಕ್ಷರಾದ ಪ್ರದೀಪ ಯಲ್ಲಾಪುರಕರ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಮಿತ ಅಂಗಡಿ, ಪ.ಪಂ ಸದಸ್ಯರಾದ ಸತೀಶ ನಾಯ್ಕ, ಶ್ರೀಮತಿ ಕಲ್ಪನಾ ನಾಯ್ಕ ಹಾಗೂ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸ ವೃಂದದವರು, ಕಾರ್ಯಕರ್ತರು ಉಪಸ್ಥಿತರಿದ್ದರು.

error: