May 19, 2024

Bhavana Tv

Its Your Channel

ವಿದ್ಯುತ್ ಅವಘಡದಿಂದ ಮೃತಪಟ್ಟ ಕಾರ್ಮಿಕರ ಕುಟುಂಬಸ್ಥರಿಗೆ ಪರಿಹಾರ ಧನದ ಚೆಕ್ ವಿತರಣೆ

ವರದಿ:ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇತ್ತೀಚೆಗೆ ವಿದ್ಯುತ್ ಅವಘಡದಿಂದ ನಾಲ್ವರು ಕಾರ್ಮಿಕರು ಮೃತಪಟ್ಟಿದರು.ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಕಾರ್ಮಿಕ ಇಲಾಖೆಯ ಮೂಲಕವಾಗಿ ಮೃತಪಟ್ಟ ಕಾರ್ಮಿಕರ ಕುಟುಂಬಸ್ಥರಿಗೆ ತಲಾ ೩ ಲಕ್ಷ ರೂಪಾಯಿಗಳ ಪರಿಹಾರ ಧನದ ಚೆಕ್‌ನ್ನು ವಿತರಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನೇಶ ಗುಂಡೂರಾವ, ಕಾರ್ಮಿಕ ಆಯುಕ್ತರಾದ ಅಕ್ರಂ ಪಾಷಾ, ಫಲಾನುಭವಿಗಳು ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರೆಂದು ಕಾರ್ಮಿಕ ಸಚಿವರ ಕಾರ್ಯಲಯ ಪ್ರಕಟಣೆಯಲ್ಲಿ ತಿಳಿಸಿದೆ.

error: