May 19, 2024

Bhavana Tv

Its Your Channel

ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಬುಡಕಟ್ಟು ಆಯೋಗ ಆಯೋಜಿಸಿರುವ ಸಂವಾದ ಕಾರ್ಯಕ್ರಮಕ್ಕೆ ವಿಧಾನ ಪರಿಷತ ಸದಸ್ಯ ಶಾಂತಾರಾಮ ಸಿದ್ದಿ ಭಾಗಿ.

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ :ವಿಧಾನ ಪರಿಷತ ಸದಸ್ಯರಾದ ಶಾಂತಾರಾಮ ಸಿದ್ದಿಯವರು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಬುಡಕಟ್ಟು ಆಯೋಗ ಆಯೋಜಿಸಿರುವ ಸಂವಾದ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದರು.
೩ ದಿನಗಳ ಕಾಲ ನಡೆಯುವ ಸಂವಾದ ಕಾರ್ಯಕ್ರಮದಲ್ಲಿ ಬುಡಕಟ್ಟು ಜನರ ಸರ್ವತೋಮುಖ ಅಭಿವೃದ್ಧಿಯ ಬಗ್ಗೆ ವಿವಿಧ ಕ್ಷೇತ್ರದ ತಜ್ಞರಿಂದ ಸಲಹೆ ಸೂಚನೆಗಳನ್ನು ಪಡೆಯಲಾಗುವುದು.ಈ ಸಂದರ್ಭದಲ್ಲಿ ಕೇಂದ್ರ ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಭೂಪೆಂದರ ಯಾದವ, ಕೇಂದ್ರ ಸಚಿವರಾದ ಫಾಗನ ಸಿಂಗ್ ಜಿ, ಬುಡಕಟ್ಟು ಆಯೋಗದ ಅಧ್ಯಕ್ಷರಾದ ಹರ್ಷ ಚವ್ಹಾಣ,ಬುಡಕಟ್ಟು ಆಯೋಗದ ಕಾರ್ಯದರ್ಶಿ ಅಲ್ಕಾ ತಿವಾರಿ,ಆಯೋಗದ ಸದಸ್ಯರಾದ ಅನಂತ ನಾಯಕ ,ಕರ್ನಾಟಕದ ಡಾ!! ಬಾಲಸುಬ್ರಹ್ಮಣ್ಯರವರು, ಇನ್ನಿತರ ಪದಾಧಿಕಾರಿಗಳು, ಅಧಿಕಾರಿಗಳುಪಸ್ಥಿತರಿದ್ದರೆಂದು ವಿಧಾನ ಪರಿಷತ ಸದಸ್ಯರಾದ ಶಾಂತಾರಾಮ ಸಿದ್ದಿಯವರ ಕಾರ್ಯಾಲಯದ ಪ್ರಕಟಣೆಯಲ್ಲಿ ತಿಳಿಸಿದೆ..

error: