
ವರದಿ:ವೇಣುಗೋಪಾಲ ಮದ್ಗುಣಿ
ಯಲ್ಲಾಪುರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಗಣಪತಿ ಉಳ್ವೇಕರ್ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಇಂದು ಯಲ್ಲಾಪುರ ಪಟ್ಟಣದ ಭಾರತೀಯ ಜನತಾ ಪಕ್ಷದ ಕಾರ್ಯಾಲಯದ ಬಳಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ವಿಜಯ ಮಿರಾಶಿ, ಪ್ರಧಾನಕಾರ್ಯದರ್ಶಿ ಡಾ.ರವಿ ಭಟ್ ಬರಗದ್ದೆ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಮಿತ್ ಅಂಗಡಿ, ಪಟ್ಟಣ ಪಂಚಾಯತ ಮಾಜಿ ಅಧ್ಯಕ್ಷರಾದ ಮಂಜುನಾಥ ರಾಯ್ಕರ್ ಹಾಗೂ ಕಮಲಾಕಾಂತ ನಾಯಕ, ನರಸಿಂಹ ಕಿರಗಾರೆ ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ