
ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ: ಕರ್ನಾಟಕ ರಾಜ್ಯದ ಜಾನಪದ ಕಲೆಗಳಿಗೆ ಪ್ರೋತ್ಸಾಹ ನೀಡಿ ಅದನ್ನು ಶ್ರೀಮಂತಗೊಳಿಸುವAತೆ ಪ್ರಯತ್ನಿಸಲಾಗುವುದು ಎಂದು ಸಂಸ್ಕೃತಿ ಇಲಾಖೆ ಸಚಿವ ಸುನೀಲಕುಮಾರ ಹೇಳಿದರು.
ಅವರು ಗಾಂಧಿ ಕುಟೀರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜೀವನ ವಿಕಾಸ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಬುಡಕಟ್ಟು ಸಿದ್ದಿ ಸಾಂಸ್ಕೃತಿಕ ಉತ್ಸವವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಿದ್ದರು. ಅಮೃತ ಭಾರತಿಗೆ ಕನ್ನಡದಾರತಿ ಎಂಬ ಧ್ಯೇಯದಂತೆ ಕಲೆ, ಕಲಾವಿದರನ್ನು ಪ್ರೋತ್ಸಾಹಿಸಲಾಗುವುದು ಎಂದರು.
ಪAಚಾಯತ್ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ ಯಲ್ಲಾಪುರ ಮಾತನಾಡಿ, ಸಿದ್ದಿ ಸಮುದಾಯ ಅಭಿವೃದ್ಧಿಯ ಪಥದತ್ತ ಸಾಗುತ್ತಿದೆ. ಕ್ರೀಡೆ, ಸಾಂಸ್ಕೃತಿ ವಿಭಾಗದಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುತ್ತಿದ್ದಾರೆ. ಈ ಸಮುದಾಯ ಇನ್ನಷ್ಟು ಅಭಿವೃದ್ಧಿ ಸಾಧಿಸಲು ಸರ್ಕಾರದ ಪ್ರೋತ್ಸಾಹ ಅಗತ್ಯ ಎಂದು ಹೇಳಿದರು.
ವಾಲ್ಮೀಕಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀ ಸಿದ್ದಿ ಅಧ್ಯಕ್ಷತೆ ವಹಿಸಿದ್ದರು. ವಿ.ಪ. ಸದಸ್ಯ ಶಾಂತಾರಾಮ ಸಿದ್ದಿ ಮಾತನಾಡಿದರು.
ಇದೇ ವೇಳೆ ಸಿದ್ದಿ ಸಾಧಕರನ್ನು ಸಂಮಾನಿಸಲಾಯಿತು.ಕೆಎಸ್ಸಾಟಿಸಿ ನಿಗಮದ ಅಧ್ಯಕ್ಷರಾದ ವಿ.ಎಸ್.ಪಾಟೀಲ, ಪ.ಪಂ ಅಧ್ಯಕ್ಷೆ ಸುನಂದಾ ದಾಸ, ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ್, ಕಾರವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಾರಾಯಣ .ಜಿ.ನಾಯಕ , ಭಾಗವಹಿಸಿದ್ದರು. ನಾಗೇಶಕುಮಾರ ನಿರೂಪಿಸಿದರು

More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ