May 19, 2024

Bhavana Tv

Its Your Channel

ವಿಶ್ವ ದರ್ಶನ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ” ವಿಶ್ವ ದರ್ಶನ ಸಂಭ್ರಮ ” ಕಾರ್ಯಕ್ರಮ

ವರದಿ:-ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ಪಟ್ಟಣದ ವಿಶ್ವ ದರ್ಶನ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ” ವಿಶ್ವ ದರ್ಶನ ಸಂಭ್ರಮ ” ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಸಚಿವರಾದ ಬಿ.ಸಿ.ನಾಗೇಶ ಅವರೊಂದಿಗೆ ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಸಚಿವರು,ಮೊದಲು ಹಣ ಉಳ್ಳವವರಿಗೆ ಮಾತ್ರ ಶಿಕ್ಷಣ ಎಂಬ ಕಾಲವಿತ್ತು . ಆದರೆ , ಇದೀಗ ಪ್ರತಿ ಮಕ್ಕಳು ಉತ್ತಮ ಶಾಲೆಯಲ್ಲಿ ಕಲಿಯಲು ಬಯಸುತ್ತಾರೆ . ಸ್ಪರ್ಧಾತ್ಮಕವಾಗಿ ಮಕ್ಕಳು ಕಲಿಯುವ ರೀತಿಯಲ್ಲಿ ಗ್ರಾಮ ಪಂಚಾಯಿತಿಗೊAದು ಮಾದರಿ ಶಾಲೆಯನ್ನು ಅಭಿವೃದ್ಧಿಪಡಿಸಿ ಆ ಭಾಗದ ಎಲ್ಲಾ ಮಕ್ಕಳು ಅಲ್ಲಿ ಕಲಿಯುವಂತಹ ವ್ಯವಸ್ಥೆ ಆಗುವ ನಿಟ್ಟಿನಲ್ಲಿ ಮಲೆನಾಡು ಭಾಗದ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಶಿಕ್ಷಣ ಸಚಿವರಿಗೆ ಮನವಿ ಮಾಡಿರುವುದಾಗಿ ಹೇಳಿದರು .
ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯರಾದ ಎನ್.ರವಿಕುಮಾರ್, ಶಾಂತಾರಾಮ ಸಿದ್ದಿ, ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ, ವಾಯುವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ವಿ.ಎಸ್.ಪಾಟೀಲ, ಸಂಸ್ಥೆಯ ಅಧ್ಯಕ್ಷರಾದ ಹರಿಪ್ರಕಾಶ ಕೋಣೆಮನೆ ಹಾಗೂ ನರಸಿಂಹ ಕೋಣೆಮನೆ ಹಾಗೂ ಶಿಕ್ಷಕ ವೃಂದ,ಅನೇಕ ಪಾಲಕರು ಉಪಸ್ಥಿತರಿದ್ದರು.

error: