April 10, 2025

Bhavana Tv

Its Your Channel

ಯಲ್ಲಾಪುರ; ಅಡಿಕೆ ಭವನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ: ಜೂನ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪಟ್ಟಣದ ಅಡಿಕೆ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಯಲ್ಲಾಪುರ ಮಂಡಳ, ಪತಂಜಲಿ ಯೋಗ ಸಮಿತಿ ಹಾಗೂ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವ ವಿದ್ಯಾಲಯ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರವರು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಎನ್.ಗಾಂವ್ಕರ,ವಿ.ಕೆ.ಭಟ್ಟ, ಪತಂಜಲಿ ಯೋಗ ಸಮಿತಿಯ ಪದಾಧಿಕಾರಿಗಳು, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವ ವಿದ್ಯಾಲಯ ಪ್ರಮುಖರು ಯೋಗ ಪಟುಗಳು ಉಪಸ್ಥಿತರಿದ್ದರು.

error: