
ವರದಿ: ವೇಣುಗೋಪಾಲ ಮದ್ಗುಣಿ
.ಯಲ್ಲಾಪುರ : ವಿಧಾನ ಪರಿಷತ ಸದಸ್ಯರಾದ ಶಾಂತಾರಾಮ ಸಿದ್ದಿಯವರು ತಾಲ್ಲೂಕಿನ ಇಡಗುಂದಿ ಗ್ರಾಮ ಪಂಚಾಯತನ ಗ್ರಾಮ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಅಧಿಕಾರಿಗಳು ಹಾಗೂ ಸಾರ್ವಜನಿಕರ ನಡುವೆ ಸಮನ್ವಯತೆ ಮತ್ತು ಸಂಪರ್ಕ ಚೆನ್ನಾಗಿ ಇದ್ದರೆ ಸರ್ಕಾರದ ಎಲ್ಲಾ ಯೋಜನೆಗಳು ಯಶಸ್ವಿಯಾಗಲು ಸಹಕಾರಿಯಾಗುತ್ತದೆ ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅತೀ ಹತ್ತಿರ ಇರುವ ಗ್ರಾಮ ಪಂಚಾಯತ ಸಿಬ್ಬಂಧಿಗಳು ಹಾಗೂ ಪಂಚಾಯತ ಜನಪ್ರತಿನಿಧಿಗಳು ಕೆಲಸ ಮಾಡಬೇಕು ಎಂದರು.
ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಅನೇಕ ವಿಷಯಗಳ ಸುದೀರ್ಘ ಚರ್ಚೆಯಾಯಿತು.ಈ ಸಂದರ್ಭದಲ್ಲಿ ಇಡಗುಂದಿ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು,ಪಂಚಾಯತ್ ನೋಡಲ್ ಅಧಿಕಾರಿ ಹಾಗೂ ವಲಯ ಅರಣ್ಯಾಧಿಕಾರಿಗಳಾದ ಪ್ರಸಾದ ಪೆಡ್ನೇಕರ,ಪಂಚಾಯತ ಅಭಿವೃದ್ಧಿ ಅಧಿಕಾರಿ ಚನ್ನವೀರರವರು ವಿವಿಧ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು, ಮತ್ತಿತರರು ಉಪಸ್ಥಿತರಿದ್ದರು..

More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ