
ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ : ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಯಲ್ಲಾಪುರ ಘಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಮತ್ತು ಸಂವಾದ ಕಾರ್ಯಕ್ರಮ ಜುಲೈ 23ರ ಶನಿವಾರದಂದು ಯಲ್ಲಾಪುರ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಲಿದೆ.
ಈ ಕುರಿತು ಬುಧವಾರ ಕಾರ್ಯಕ್ರಮದ ಮೊದಲ ಆಮಂತ್ರಣ ಪತ್ರಿಕೆಯನ್ನು ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರ ಅವರಿಗೆ ಸಂಘದ ಪದಾಧಿಕಾರಿಗಳು ನೀಡಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವಂತೆ ಆಮಂತ್ರಿಸಿದರು.
ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಧಾನಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ವಾ ಕ ರ ಸಾ ನಿಗಮ ಹುಬ್ಬಳ್ಳಿಯ ಅಧ್ಯಕ್ಷ ವಿ ಎಸ್ ಪಾಟೀಲ್, ಪ.ಪಂ ಅಧ್ಯಕ್ಷೆ ಸುನಂದಾ ದಾಸ್, ಕರ್ನಾಟಕ ಜರ್ನಲಿಸ್ಟ್ ಯುನಿಯನ್ ರಾಜ್ಯ ಕಾರ್ಯಕಾರಿಣಿ ಸದಸ್ಯ ನಾಗರಾಜ ಮದ್ಗುಣಿ ಮುಖ್ಯ ಅತಿಥಿಗಳಾಗಿದ್ದಾರೆ. ವಿಜಯವಾಣಿ ದೈನಿಕ ಹುಬ್ಬಳ್ಳಿ ಸ್ಥಾನಿಕ ಸಂಪಾದಕರಾದ ಪ್ರಕಾಶ ಶೇಟ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಯಲ್ಲಾಪುರ ಘಟಕದ ಅಧ್ಯಕ್ಷ ಶಂಕರ ಭಟ್ಟ ತಾರೀಮಕ್ಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ಉತ್ತಮ ತಹಶೀಲ್ದಾರ ಪ್ರಶಸ್ತಿ ಪುರಸ್ಕೃತರಾದ ಶ್ರೀಕೃಷ್ಣ ಕಾಮ್ಕರ, ಒಂಬತ್ತು ಬಾರಿ ಚುನಾವಣೆಯಲ್ಲಿ ಗೆದ್ದು ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡ ಹಿರಿಯರಾದ ಶ್ರೀಕಾಂತ ಶೆಟ್ಟಿ, ಸಾಹಿತ್ಯ, ರಾಜಕೀಯ, ಪತ್ರಿಕೆ ಸಾಮಾಜಿಕ ಕ್ಷೇತ್ರದಲ್ಲಿಯ ಸೇವೆಗಾಗಿ ಗ ರಾ ಭಟ್ , 50 ವರ್ಷಗಳಿಂದ ಮಣ್ಣಿನ ಮೂರ್ತಿ ನಿರ್ಮಾಣ ಕಾರ್ಯದ ಕಲಾವಿದ ವಿನಾಯಕ ಗುನಗಾ, ಯಲ್ಲಾಪುರದ ಪ್ರಥಮ ಮಹಿಳಾ ಅಟೋ ಚಾಲಕಿಯಾದ ಗೋಧಾವರಿ ಭಟ್ಟ ಇವರನ್ನು ಸನ್ಮಾನಿಸಲಾಗುವುದು.
ನಂತರ ಕಾಲೇಜು ವಿದ್ಯಾರ್ಥಿಗಳೊಂದಿಗೆ ಪತ್ರಿಕೆ ಹಾಗೂ ವರದಿಗಾರಿಕೆಗೆ ಸಂಬoಧಿಸಿದoತೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಶಂಕರ ಭಟ್ಟ ತಾರೀಮಕ್ಕಿ ಹಾಗೂ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಿ ಎಸ್ ಭಟ್ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
.

More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ