
ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ : ಯುವನಾಯಕರಾದ ವಿವೇಕ ಹೆಬ್ಬಾರವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಸಭಾಂಗಣದಲ್ಲಿ ತಮ್ಮ ಸಂಸ್ಥೆಯ ಮೂಲಕವಾಗಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ” ನೋಟ್ ಬುಕ್ ವಿತರಣಾ ” ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ನೋಟ್ ಬುಕ್ ಗಳನ್ನು ವಿತರಿಸಿದರು.
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಯುವನಾಯಕರಾದ ವಿವೇಕ ಹೆಬ್ಬಾರವರು, ಇಂದಿನ ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಯಲ್ಲಿ ಜಾಗತಿಕ ಮಟ್ಟದಲ್ಲಿ ನಡೆಯುವ ಪ್ರಸ್ತುತ ವಿದ್ಯಮಾನಗಳ ಜ್ಞಾನವನ್ನು ಹೊಂದಿರಬೇಕು, ನಮ್ಮ ದೇಶ, ರಾಜ್ಯ ಹಾಗೂ ನಮ್ಮೂರ ಬಗ್ಗೆ ಪ್ರತಿಯೊಬ್ಬ ವಿದ್ಯಾರ್ಥಿಯು ಅಭಿಮಾನ ಹಾಗೂ ಸಾಮಾಜಿಕ ಕಳಕಳಿಯನ್ನು ಹೊಂದಿರಬೇಕು ಎಂದರು.ನಮ್ಮ ಕುಟುಂಬವು ಕಳೆದ 15 ವರ್ಷಗಳಿಂದ ಕ್ಷೇತ್ರದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬೆಂಬಲವಾಗಿ ನಿಂತಿದೆ, ನಮ್ಮಿಂದ ಸಹಾಯವನ್ನು ಪಡೆದ ವಿದ್ಯಾರ್ಥಿಗಳು ಉನ್ನತ ಸ್ಥಾನವನ್ನು ಪಡೆದಾಗ ಮಾತ್ರ ಆತ್ಮಸಂತೃಪ್ತಿ ಭಾವ ನಮ್ಮಲ್ಲಿ ಮೂಡುತ್ತದೆ. ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಗೆ ಹೆಚ್ಚಿನ ಕಾಳಜಿಯನ್ನು ವಹಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಎನ್.ಗಾಂವ್ಕರ್, ಉಪಾಧ್ಯಕ್ಷರಾದ ಶಿರಿಷ್ ಪ್ರಭು, ಪ್ರಧಾನ ಕಾರ್ಯದರ್ಶಿ ಡಾ.ರವಿ ಭಟ್ ಬರಗದ್ದೆ, ಪ್ರಮುಖರಾದ ವಿಜಯ ಮಿರಾಶಿ, ರಾಮು ನಾಯ್ಕ, ಪ.ಪಂ ಅಧ್ಯಕ್ಷರಾದ ಸುನಂದಾ ದಾಸ, ಉಪಾಧ್ಯಕ್ಷರಾದ ಶ್ಯಾಮಿಲಿ ಪಾಟಣಕರ, ಸದಸ್ಯರಾದ ರವಿ ಪಾಟಣಕರ, ಶ್ರೀಮತಿ ಜ್ಯೋತಿ ನಾಯ್ಡು, ನಾಮನಿರ್ದೇಶಿತ ಸದಸ್ಯರಾದ ಕುಮುದಾ ಸಾಣೆ, ಪ್ರಾಂಶುಪಾಲರಾದ ಡಿ.ಎಸ್.ಭಟ್ ಹಾಗೂ ಉಪನ್ಯಾಸಕರು, ಪ್ರಮುಖರು ಉಪಸ್ಥಿತರಿದ್ದರು.

More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ