May 1, 2024

Bhavana Tv

Its Your Channel

ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಪ್ರೇರಣಾ ಶಿಬಿರ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ: ತಾಲೂಕಿನ ಹತ್ತನೇ ವರ್ಗದ ವಿದ್ಯಾರ್ಥಿಗಳಿಗಾಗಿ ಪ್ರೇರಣಾ ಶಿಬಿರವು ಪಟ್ಟಣದ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಿತು.

ಹತ್ತನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಹೆಚ್ಚಿನ ಅರಿವಿಗಾಗಿ ಮತ್ತು ವಿವಿಧ ಸಂಪನ್ಮೂಲ ವ್ಯಕ್ತಿಗಳ ಸೂಕ್ತ ಮಾರ್ಗದರ್ಶನದಿಂದ ವಿದ್ಯಾರ್ಥಿಗಳಲ್ಲಿ ಓದುವ ಸಾಮರ್ಥ್ಯವನ್ನು, ಜ್ಞಾನದ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರೇರಣಾ ಶಿಬಿರವನ್ನು ನಡೆಸಲಾಗುತ್ತಿದೆ.

ಕ್ಷೇತ್ರಶಿಕ್ಷಣಾಧಿಕಾರಿಗಳ ಸೂಕ್ತ ಮಾರ್ಗದರ್ಶನ ಹಾಗೂ ಸಲಹೆ ಸೂಚನೆಗಳಂತೆ ಈ ಪ್ರೇರಣಾ ಶಿಬಿರವನ್ನು ಆಯೋಜಿಸಲಾಗಿದೆ. ಪ್ರೇರಣಾ ಶಿಬಿರವು ಪ್ರಾರಂಭವಾಗಿ ನಿರಂತರವಾಗಿ ವಾರಕ್ಕೊಂದರAತೆ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆಯುತ್ತಿದ್ದು ಈಗಾಗಲೇ ಒಟ್ಟು ೬ ಪ್ರೇರಣ ಶಿಬಿರಗಳು ಆಯೋಜಿಸಲ್ಪಟ್ಟಿದೆ.ಇಂದಿನ ಪ್ರೇರಣಾ ಶಿಬಿರದ ಉಪನ್ಯಾಸಕರಾಗಿ ಶಿಕ್ಷಕರು ಹಾಗೂ ಸಂಪನ್ಮೂಲ ವ್ಯಕ್ತಿ ಗಳಾದ ಭರತನಹಳ್ಳಿ ಪ್ರೌಢಶಾಲೆಯ ಶಿಕ್ಷಕರಾದ ಪ್ರಕಾಶ್ ಭಟ್ ರವರು ಆಂಗ್ಲಭಾಷೆಯ ವ್ಯಾಕರಣಗಳು ಹಾಗೂ ಪರೀಕ್ಷೆ ಎದುರಿಸುವ ಕೌಶಲ್ಯಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಪ್ರತಿ ವಾರ ಈ ಪ್ರೇರಣಾ ಶಿಬಿರ ಆಯೋಜಿಸಿ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯವನ್ನು ಹೋಗಲಾಡಿಸುವುದು ಹೆಚ್ಚಿನ ಅಂಕಗಳಿಕೆಗೆ ಬೇಕಾದ ಕೌಶಲ್ಯಗಳನ್ನು ರೂಪಿಸುವುದು ನಿರಂತರ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವುದು,ಸುಲಭವಾಗಿ ಪರೀಕ್ಷೆಯನ್ನು ಎದುರಿಸುವ ಸಾಮರ್ಥ್ಯವನ್ನು ಹೆಚ್ಚಿಸುವುದು ಇವೇ ಮೊದಲಾದ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಪ್ರೇರಣಾ ಶಿಬಿರವನ್ನು ಆಯೋಜಿಸಲಾಗಿದೆ.

ಶಾಲೆಯ ಮುಖ್ಯೋಪಾಧ್ಯಾಯರಾದ ಮುಕ್ತಾ ಶಂಕರ ಹಾಗೂ ಉಳಿದ ಎಲ್ಲಾ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ತಾಲೂಕಿನ ಸಂಪನ್ಮೂಲ ವ್ಯಕ್ತಿಗಳ ಸಹಕಾರದಿಂದ ತರಗತಿಗಳು ನಡೆಯುತ್ತಿದೆ.
ತಾಲೂಕಿನ ವಿವಿಧ ಶಾಲೆಗಳಿಂದ ಸುಮಾರು ೭೦ ವಿದ್ಯಾರ್ಥಿಗಳು ಈ ಶಿಬಿರದ ಪ್ರಯೋಜನ ಪಡೆದುಕೊಂಡರು .

error: