
ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ : ಶೈಕ್ಷಣಿಕ ಮತ್ತು ಇತರೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡವ ಮಾತೃಭೂಮಿ ಸೇವಾ ಪ್ರತಿಷ್ಠಾನಕ್ಕೆ ಸಂಸ್ಥೆಯ ಟ್ರಸ್ಟಿ, ಚಾರ್ಟರ್ಡ ಅಕೌಂಟೆAಟ್ ಜನಾರ್ಧನ ಹೆಬ್ಬಾರ ಒಂದು ಲಕ್ಷ ರೂ ದೇಣಿಗೆ ನೀಡಿದ್ದಾರೆ
ಮೂಲತಃ ಯಲ್ಲಾಪುರ ತಾಲೂಕಿನ ಕಳಚೆ ಗ್ರಾಮದ ಜನಾರ್ಧನ ಹೆಬ್ಬಾರ ಈ ಹಣದ ಮೇಲೆ ಬಂದ ಬಡ್ಡಿ ಹಣವನ್ನು ಕಳಚೆ ಗ್ರಾಮದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಮೀಸಲಿರಿಸಲು ವಿನಂತಿಸಿದ್ದಾರೆ. ಕಳೆದ ವರ್ಷ ಭೀಕರ ಮಳೆ ಮತ್ತು ಕಳಚೆ ಗುಡ್ಡ ಕುಸಿತದಿಂದಾಗಿ ನೂರಾರು ಕುಟುಂಬಗಳು ಸಂತ್ರಸ್ಥ ವಾದಾಗ ಮಾತೃಭೂಮಿ ಸೇವಾ ಪ್ರತಿಷ್ಠಾನ 11 ಲಕ್ಷ ರೂ. ಆರ್ಥಿಕ ಸಹಾಯ ನೀಡಿದ್ದು ಕಳಚೆ ನಿಧಿ ಒಟ್ಟುಗೂಡಿಸುವ ಕೈಂಕರ್ಯದಲ್ಲಿ ಜನಾರ್ಧನ ಹೆಬ್ಬಾರ ಮಹತ್ವದ ಪಾತ್ರ ವಹಿಸಿದ್ದನ್ನು ಸ್ಮರಿಸಬಹುದು. ಪ್ರತಿಷ್ಠಾನದ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.

More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ