April 4, 2025

Bhavana Tv

Its Your Channel

ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಸಚಿವ ಶಿವರಾಮ ಹೆಬ್ಬಾರ

ವರದಿ:ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರ ಅವರು ಇಂದು ಪಟ್ಟಣದ ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕಾ ಪಂಚಾಯತ, ಪಟ್ಟಣ ಪಂಚಾಯತ ಯಲ್ಲಾಪುರ ಹಾಗೂ ತಾಲೂಕಾ ಯುವ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ” ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ “ಕ್ಕೆ ಚಾಲನೆ ನೀಡಿ ,ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯರಾದ ಶಾಂತಾರಾಮ ಸಿದ್ದಿ, ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ, ಪ್ರಮುಖರಾದ ವಿಜಯ ಮಿರಾಶಿ, ಪಟ್ಟಣ ಪಂಚಾಯತ ಅಧ್ಯಕ್ಷರಾದ ಸುನಂದಾ ದಾಸ, ಉಪಾಧ್ಯಕ್ಷರಾದ ಶ್ಯಾಮಿಲಿ ಪಾಟಣಕರ್, ಮಂಡಲ ಪ್ರಧಾನ ಕಾರ್ಯದರ್ಶಿ ಡಾ.ರವಿ ಭಟ ಬರಗದ್ದೆ ಹಾಗೂ ಕ್ರೀಡಾ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಗಳು ಉಪಸ್ಥಿತರಿದ್ದರು

error: