May 3, 2024

Bhavana Tv

Its Your Channel

ಶಿಕ್ಷಕರ ದಿನಾಚರಣೆಯ ಗುರು ಗೌರವಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಶಿವರಾಮ ಹೆಬ್ಬಾರ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ಪಟ್ಟಣದ ವೇದವ್ಯಾಸ ಕಲ್ಯಾಣ ಮಂಟಪದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ತಾಲೂಕಾ ಶಿಕ್ಷಕ ದಿನಾಚರಣೆ ಸಮಿತಿಯ ವತಿಯಿಂದ ಆಯೋಜಿಸಿದ್ದ ” ಶಿಕ್ಷಕರ ದಿನಾಚರಣೆಯ ಗುರು ಗೌರವಾರ್ಪಣೆ ” ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಮಿಕ ಇಲಾಖೆಯ ಸಚಿವರು, ತಾಲೂಕಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿ, ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಿದರು ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ, ಪಂಚಾಯತ ಅಧ್ಯಕ್ಷರಾದ ಸುನಂದಾ ದಾಸ್, ಉಪಾಧ್ಯಕ್ಷರಾದ ಶ್ಯಾಮಿಲಿ ಪಾಟಣಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ, ತಾಲೂಕಾ ಪಂಚಾಯತ ಕಾರ್ಯನಿರ್ವಹಕ ಅಧಿಕಾರಿ ಜಗದೀಶ ಕಮ್ಮಾರ ಹಾಗೂ ತಾಲೂಕಾ ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಿಕ್ಷಕರು, ಅಧಿಕಾರಿಗಳು ಉಪಸ್ಥಿತರಿದ್ದರು.

error: