
ಯಲ್ಲಾಪುರ : ಮಾಜಿ ಸಚಿವರು, ಭಾಪೂಜಿ ಗ್ರಾಮೀಣ ವಿಕಾಸ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಪ್ರಭಾಕರ ರಾಣೆ ಅವರು ನಿಧನರಾಗಿದ್ದಾರೆ.
ಕಾರವಾರದಿಂದ ಮೂರು ಸಲ ವಿಧಾನ ಸಭೆಗೆ ಆಯ್ಕೆಯಾಗಿದ್ದರು. ಸಂಪುಟದಲ್ಲಿ ವಯಸ್ಕರ ಶಿಕ್ಷಣ ಸಚಿವರಾಗಿ ಕೆಲಸ ನಿರ್ವಹಿಸಿದ್ದರು, ಕಾರವಾರದ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ್ದ ಪ್ರಭಾಕರ ರಾಣೆ ಅವರು ನಂತರ ಭಾಪೂಜಿ ಗ್ರಾಮೀಣ ವಿಕಾಸ ಸಮಿತಿ ಸ್ಥಾಪಿಸಿ ಕಾರವಾರ ಜೊಯಿಡಾ ತಾಲೂಕಿನಲ್ಲಿ ಶಾಲಾ ಕಾಲೇಜು ಸ್ಥಾಪಿಸಿ ಸಾವಿರಾರು ಬಡ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ಬೆಳಕಾಗಿದ್ದರು. ಶ್ರೀಯುತ ನಿಧನದಿಂದ ಸಮಾಜಕ್ಕೆ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.
ಪ್ರಭಾಕರ ರಾಣೆಯವರ ನಿಧನಕ್ಕೆ ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರ, ವಿಧಾನ ಪರಿಷತ ಸದಸ್ಯರಾದ ಶಾಂತಾರಾಮ ಸಿದ್ದಿ , ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ವೇಣುಗೋಪಾಲ ಮದ್ಗುಣಿ,ರಾಮು ನಾಯ್ಕ,ಬಿರಣ್ಣಾ ನಾಯ್ಕ ಮೊಗಟಾ,ಪ್ರಮೋದ ಹೆಗಡೆ ಮುಂತಾದವರು ಶೋಕ ವ್ಯಕ್ತಪಡಿಸಿದ್ದಾರೆ.

More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ