May 4, 2024

Bhavana Tv

Its Your Channel

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಯಲ್ಲಾಪುರ ಯುವ ಮೋರ್ಚಾದ ವತಿಯಿಂದ ಆಯೋಜಿಸಿದ್ದ ” ರಕ್ತದಾನ ಶಿಬಿರ ” ವನ್ನು ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರ ಅವರು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಯಲ್ಲಾಪುರ ಪಟ್ಟಣ ಪಂಚಾಯತ ಅಧ್ಯಕ್ಷರಾದ ಸುನಂದಾ ದಾಸ, ಉಪಾಧ್ಯಕ್ಷರಾದ ಶಾಮಿಲಿ ಪಾಟಣಕರ, ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ, ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಎನ್.ಗಾಂವ್ಕರ, ಯುವ ನಾಯಕರಾದ ವಿವೇಕ ಹೆಬ್ಬಾರ, ಪ್ರಧಾನ ಕಾರ್ಯದರ್ಶಿ ಡಾ.ರವಿ ಭಟ್ ಬರಗದ್ದೆ, ಪ್ರಸಾದ ಹೆಗಡೆ, ಯುವ ಮೋರ್ಚಾ ಅಧ್ಯಕ್ಷರಾದ ಪ್ರದೀಪ ಯಲ್ಲಾಪುರಕರ್, ಪ್ರಮುಖರಾದ ವಿಜಯ ಮಿರಾಶಿ ಹಾಗೂ ಪಟ್ಟಣ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

error: