May 21, 2024

Bhavana Tv

Its Your Channel

ಶ್ರೀ ಮಹಾಂತ ದೇಶೀಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದ ಸಚಿವ ಶಿವರಾಮ ಹೆಬ್ಬಾರ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ಯಲ್ಲಾಪುರ ಪಟ್ಟಣಕ್ಕೆ ಆಗಮಿಸಿರುವ ಶಿಕಾರಿಪುರ ತಾಲೂಕಿನ ತೊಗರ್ಸಿಯ ಮಳೆ ಹಿರೇಮಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಮಹಾಂತ ದೇಶೀಕೇಂದ್ರ ಸ್ವಾಮೀಜಿಗಳನ್ನು ಭೇಟಿಯಾಗಿ ಆಶೀರ್ವಾದವನ್ನು ಪಡೆದರು.ಪೂಜ್ಯರಾದ ಶ್ರೀ ಮಹಾಂತ ದೇಶೀಕೇಂದ್ರ ಸ್ವಾಮಿಗಳು ಮಳೆಹಿರೇಮಠದ ಪುನರ ನಿರ್ಮಾಣ ಕಾರ್ಯಕ್ಕೆ ಸರಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಿ ಹೆಚ್ಚಿನ ಅನುದಾನವನ್ನು ಮಂಜೂರು ಮಾಡುವಂತೆ ಸಚಿವರಿಗೆ ಮನವಿ ನೀಡಿದರು

error: