April 27, 2024

Bhavana Tv

Its Your Channel

ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟಿಸಿದ ಸಚಿವ ಶಿವರಾಮ ಹೆಬ್ಬಾರ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ಪಟ್ಟಣದ ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ ” ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ” ಉದ್ಘಾಟಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯರಾದ ಶಾಂತಾರಾಮ ಸಿದ್ದಿ, ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ, ಪಟ್ಟಣ ಪಂಚಾಯತ ಅಧ್ಯಕ್ಷರಾದ ಸುನಂದಾ ದಾಸ್, ಉಪಾಧ್ಯಕ್ಷರಾದ ಶ್ಯಾಮಿಲಿ ಪಾಟಣಕರ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎನ್.ಆರ್.ಹೆಗಡೆ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ನಾರಾಯಣ ನಾಯ್ಕ, ತಾಲೂಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಆರ್. ಆರ್. ಭಟ್ಟ, ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು, ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು.

error: