May 15, 2024

Bhavana Tv

Its Your Channel

ಲಿಂಗದಬೈಲ್ ಹಾಲು ಡೈರಿ ಕಟ್ಟಡಕ್ಕೆ ಸಚಿವ ಶಿವರಾಮ ಹೆಬ್ಬಾರರಿಂದ ಶಿಲಾನ್ಯಾಸ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ತಾಲೂಕಿನ ಇಡಗುಂದಿ ಗ್ರಾಮ ಪಂಚಾಯತ ವ್ಯಾಪ್ತಿಯ ಲಿಂಗದಬೈಲ್ ಗ್ರಾಮದ ಹಾಲು ಡೈರಿ ಬಳಿ 5.65 ಕೋಟಿ ರೂಪಾಯಿ ವೆಚ್ಚದಲ್ಲಿ ” ಇಡಗುಂದಿ – ಬಳಗಾರ – ದೇಹಳ್ಳಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಯುವ ನಾಯಕರಾದ ವಿವೇಕ ಹೆಬ್ಬಾರ, ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಎನ್.ಗಾಂವ್ಕರ, ಪ್ರಧಾನ ಕಾರ್ಯದರ್ಶಿ ಡಾ.ರವಿ ಭಟ್ ಬರಗದ್ದೆ, ಉಪಾಧ್ಯಕ್ಷರಾದ ಶಿರಿಷ್ ಪ್ರಭು, ಖಜಾಂಚಿ ಮುರಳಿ ಹೆಗಡೆ, ಪ್ರಮುಖರಾದ ಶ್ರೀಕಾಂತ ಶೆಟ್ಟಿ, ಪ್ರಕಾಶ ಹೆಗಡೆ, ಗಣಪತಿ ಮುದ್ದೇಪಾಲ ಹಾಗೂ ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

error: