February 6, 2023

Bhavana Tv

Its Your Channel

ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ 1.90 ಕೋಟಿರೂ ಕಾಮಗಾರಿಗೆ ಸಚಿವ ಶಿವರಾಮ ಹೆಬ್ಬಾರ ಚಾಲನೆ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸುಮಾರು 1.90 ಕೋಟಿ ರೂಪಾಯಿ ಆಸ್ಪತ್ರೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
30 ಲಕ್ಷ ರೂಪಾಯಿ ವೆಚ್ಚದಲ್ಲಿ 6 ಕೆಎಲ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಫೌಂಡೇಶನ್ ನಿರ್ಮಾಣ, 20 ಲಕ್ಷ ರೂಪಾಯಿ ವೆಚ್ಚದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ವಸತಿ ಗೃಹಗಳ ದುರಸ್ತಿ ಮತ್ತು ನವೀಕರಣ, 85 ಲಕ್ಷ ರೂಪಾಯಿ ವೆಚ್ಚದಲ್ಲಿ ಆಸ್ಪತ್ರೆಯ ಸಿಬ್ಬಂದಿಗಳ ವಸತಿಗೃಹಗಳ ದುರಸ್ತಿ ಹಾಗೂ ನವೀಕರಣ, 55 ಲಕ್ಷ ರೂಪಾಯಿ ವೆಚ್ಚದಲ್ಲಿ ಬ್ಲಾಕ್ ಲೆವೆಲ್ ಪಬ್ಲಿಕ್ ಹೆಲ್ತ್ ಯುನಿಟ್ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಎನ್.ಗಾಂವ್ಕರ, ಪಟ್ಟಣ ಪಂಚಾಯತ ಅಧ್ಯಕ್ಷರಾದ ಸುನಂದಾ ದಾಸ, ಉಪಾಧ್ಯಕ್ಷರಾದ ಶ್ಯಾಮಿಲಿ ಪಾಟಣಕರ್, ಪ್ರಮುಖರಾದ ವಿಜಯ ಮಿರಾಶಿ, ಪಟ್ಟಣ ಪಂಚಾಯತ ಸದಸ್ಯರಾದ ಸತೀಶ ನಾಯ್ಕ,ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ.ನರೇಂದ್ರ ಪವಾರ ಹಾಗೂ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

About Post Author

error: