May 19, 2024

Bhavana Tv

Its Your Channel

9.95 ಕೋಟಿ ರೂಪಾಯಿ ವೆಚ್ಚದಲ್ಲಿ ಗಣೇಶ ಫಾಲ್ಸ್ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ಹಾಗೂ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರು ಯಲ್ಲಾಪುರ – ಶಿರಸಿ ತಾಲೂಕನ್ನು ಸಂಪರ್ಕಿಸುವ ಹಿತ್ಲಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಗಣೇಶ ಫಾಲ್ಸ್ ಹಳ್ಳಕ್ಕೆ 9.95 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಹಿತ್ಲಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಪ್ರಸನ್ನ ಭಟ್, ಉಮ್ಮಚಗಿ ಗ್ರಾಮ ಪಂಚಾಯತ ಅಧ್ಯಕ್ಷರಾದ ರೂಪಾ ಪೂಜಾರಿ ಸೇರಿದಂತೆ ಗ್ರಾಮ ಪಂಚಾಯತ ಸದಸ್ಯರು, ಸ್ಥಳೀಯ ಮುಖಂಡರು, ಪಕ್ಷದ ವಿವಿಧಸ್ಥರಸ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

error: