
ಯಲ್ಲಾಪುರ ಕ್ಷೇತ್ರದ ಯುವ ಮುಖಂಡ ವಿವೇಕ್ ಹೆಬ್ಬಾರ್ ಶುಕ್ರವಾರ ಅಧಿಕೃತವಾಗಿ ಅಪಾರ ಬೆಂಬಲಿಗರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಯಲ್ಲಾಪುರ ವಿಧಾನಸಭಾಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರ ಪುತ್ರ, ಉದ್ಯಮಿ ವಿವೇಕ ಹೆಬ್ಬಾರ್ ಇಂದು ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಶಿರಸಿಯ ಬನವಾಸಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಹತ್ತಕ್ಕೂ ಹೆಚ್ಚು ಪಂಚಾಯಿತಿಯ ಐದನೂರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾದರು.

ಯಲ್ಲಾಪುರ ಪಟ್ಟಣದ ಟಿ.ಎಮ್.ಎಸ್ ಎದುರು ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ವಿವೇಕ್ ಹೆಬ್ಬಾರ್ ಅವರಿಗೆ ಪಕ್ಷದ ಶಾಲು ಹಾಕಿ ಬಾವುಟವನ್ನ ನೀಡುವ ಮೂಲಕ ಸೇರ್ಪಡೆ ಮಾಡಿಕೊಂಡಿದ್ದಾರೆ.


ಈ ಸಂಧರ್ಭದಲ್ಲಿ ಬನವಾಸಿ ಭಾಗದ ಮುಖಂಡರಾದ ದ್ಯಾಮಣ್ಣ ದೊಡ್ಮನಿ, ಮಂಗಳಾ ನಾಯ್ಕ, ಸಿದ್ದು ನರೇಗಲ್, ರಘು ನಾಯ್ಕ, ಪ್ರಕಾಶ್ ಹೆಗಡೆ, ಗಣಪತಿ ನಾಯ್ಕ ಬಾಶಿ, ಪ್ರಶಾಂತ್ ಗೌಡರ್, ಜಿ.ವಿ ಹೆಗಡೆ, ಸುಭಾಷ್ ಮಡಿವಾಳ, ನಾಗೇಂದ್ರ ಮಡಿವಾಳ, ಸತೀಶ್ ನಾಯ್ಕ, ಸುರೇಶ್ ಗಡಿಗೇರಿ, ಸೇರಿದಂತೆ ಬನವಾಸಿ ಭಾಗದ ಹತ್ತು ಪಂಚಾಯತ್ ಗಳಲ್ಲಿ ಬಿಜೆಪಿ ಪಕ್ಷದಲ್ಲಿ ಸಕ್ರಿಯರಾಗಿದ್ದ ನೂರಾರು ಜನರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವಕರ್, ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಸಿ.ಎಫ್ ನಾಯ್ಕ, ವೆಂಕಟೇಶ್ ಹೆಗಡೆ ಹೊಸಬಾಳೆ, ಆರ್ ಹೆಚ್ ನಾಯ್ಕ, ಸೇರಿದಂತೆ ಹಲವರು ಉಪಸ್ಥಿತರಿದ್ದರು.
More Stories
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ
ಯಲ್ಲಾಪುರದಲ್ಲಿ ಅರಣ್ಯವಾಸಿಗಳ ಬೃಹತ್ ಸಭೆ;ಹೋರಾಟಕ್ಕೆ ಜಾತಿ, ಧರ್ಮ, ಪಕ್ಷವಿಲ್ಲ- ರವೀಂದ್ರನಾಯ್ಕ.