April 26, 2024

Bhavana Tv

Its Your Channel

ಕೋವಿಡ್ ಮೂರನೇ ಅಲೆ ಬಗ್ಗೆ ಭಯಪಡಬೇಡಿ, ಆದರೆ ಜಾಗರೂಕತೆಯಿಂದಿರಿ-ಶಶಿಕಲಾ ಜೊಲ್ಲೆ

ವಿಜಯಪುರದಲ್ಲಿ, ಕೋವಿಡ್-19 ಸೋಂಕು ನಿಯಂತ್ರಣದ ಕ್ರಮಗಳು ಹಾಗೂ ಬೆಳೆ ಪರಿಹಾರ ಕುರಿತು ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ವಿಜಯಪುರ ಜಿಲ್ಲೆಯ ಉಸ್ತುವಾರಿ ಹಾಗೂ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಯವರು ಪರಿಶೀಲನಾ ಸಭೆ ನಡೆಸಿ, ಸಮಾಲೋಚಿಸಿದರು.

ಕೋವಿಡ್ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಮಕ್ಕಳ ಚಿಕಿತ್ಸೆಗೆ ಬೇಕಾದಂತಹ ಸೌಲಭ್ಯಗಳನ್ನು ಅಳವಡಿಸಲು ಹೆಚ್ಚಿನ ಆದ್ಯತೆ ನೀಡಲಾಗಿದೆ. 642 ವೆಂಟಿಲೇಟರ್ ವ್ಯವಸ್ಥೆ ಹಾಗೂ 6 ಆಮ್ಲಜನಕ ಘಟಕ ಸಿದ್ದಗೊಳಿಸಲಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮಕ್ಕಳ ತಜ್ಞರು ಲಭ್ಯರಿದ್ದಾರೆ. ಹಿರಿಯ ಕೋವಿಡ್ ಸೋಂಕಿತರೂ ಚಿಕಿತ್ಸೆ ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಯಾರೂ ಭಯಪಡುವ ಅಗತ್ಯವಿಲ್ಲ. 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಈಗಾಗಲೇ ಶೇ. 50ರಷ್ಟು ಲಸಿಕಾಕರಣ ಪೂರ್ಣಗೊಂಡಿದ್ದು, ಇನ್ನುಳಿದ ಲಸಿಕಾ ಕಾರ್ಯವನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ರೈತರ ಬೆಳೆ ಹಾನಿಗೆ ಸಂಬoಧಿಸಿದoತೆ ಪರಿಹಾರ ಕಲ್ಪಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಶೀಘ್ರದಲ್ಲೇ ರೈತರಿಗೆ ಪರಿಹಾರ ಸಿಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ರಮೇಶ ಭೂಸನೂರು , ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಅಶೋಕ ಅಲ್ಲಾಪುರ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಹರಿ ಗೊಳಸಂಗಿ, ಜಿಲ್ಲಾಧಿಕಾರಿ, ಜಿ.ಪಂ. ಸಿಒಇ ಹಾಗೂ ಅಧಿಕಾರಿಗಳು ಹಾಜರಿದ್ದರು.

error: