April 22, 2021

Bhavana Tv

Its Your Channel

ಕೊರೊನಾ ಎಫೆಕ್ಟ್ : ವಿಜಯಪುರದಲ್ಲಿ ‘ಹೋಳಿ ಹಬ್ಬ’ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಹೋಳಿ ಹಬ್ಬ ಆಚರಣೆ ನಿಷೇಧ ಮಾಡಿ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಕೊರೊನಾ 2ನೇ ಅಲೆಯ ಲಕ್ಷಣಗಳು‌ ಗೋಚರ ಹಿನ್ನೆಲೆ. ಕಳೆದ ಒಂದು ವಾರದಿಂದ ಕೊರೊನಾ ಪಾಸಿಟಿವ್ ಸಂಖ್ಯೆಗಳೂ ಹೆಚ್ಚಳವಾಗುತ್ತಿವೆ. ಹೀಗಾಗಿ ಕೊರೊನಾ ಸೋಂಕು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಮಾ. 28 ರಿಂದ ಮಾ. 31ರ ವರೆಗೆ ಹೋಳಿ‌ ಹಬ್ಬ ಆಚರಣೆ ನಿಷೇಧ ಮಾಡಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

SOURCE: News First Live

error: